ರಸ್ತೆ ಅತಿಕ್ರಮಣ ತೆರವುಗೊಳಿಸಲು ಕ್ರಮವಹಿಸಿ

23 LNG 01
ಶರಣಬಸವ ಈಚನಾಳ
Published on

ಲಿಂಗಸುಗೂರು: ಪಟ್ಟಣದ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಅನೇಕಬಾರಿ ಮನವಿ ಮಾಡಿದರೂ ಸಂಬಂಧಪಟ್ಟ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ತಾಲೂಕು ಪ್ರಧಾನ ಕಾರ್ಯದರ್ಶಿ ಶರಣಬಸವ ಈಚನಾಳ ಹೇಳಿದರು.

ಪಟ್ಟಣದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಟ್ಟಣದ ಬೈಪಾಸ್ ರಸ್ತೆಯನ್ನು ಜನರಿಗಾಗಿ ನಿರ್ಮಿಸಲಾಗಿದೆ. ರಸ್ತೆ ಅತಿಕ್ರಮಣದಿಂದ ಸಂಚಾರ ಬಂದ್ ಆಗಿದೆ. ಬಸ್ ನಿಲ್ದಾಣದ ಮುಂಭಾಗದಲ್ಲಿ ಆಟೋಗಳು, ಹಣ್ಣಿನ ಅಂಗಡಿಗಳು ಎಲ್ಲೆಂದರಲ್ಲಿ ನಿಲ್ಲುತ್ತಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿದೆ.

ಬೈಪಾಸ್ ರಸ್ತೆಯ ಎಸ್‌ಬಿಐ ಬ್ಯಾಂಕ್, ಕರ್ನಾಟಕ ಬ್ಯಾಂಕ್, ಖಾಸಗಿ ಆಸ್ಪತ್ರೆ ಮುಂಭಾಗದಲ್ಲಿ ರಸ್ತೆ ಸಂಚಾರಕ್ಕೆ ತೊಂದರೆಯಾಗಿದೆ. ಮುಖ್ಯ ಹೆದ್ದಾರಿಯಲ್ಲಿ ಎಲ್ಲೆಂದರಲ್ಲಿ ಬಿಡಾಡಿ ದನಗಳಿಂದ ವಾಹನ ಚಾಲಕರಿಗೆ ತೊಂದರೆಯಾಗುತ್ತಿದೆ. ಸಮಸ್ಯೆಗಳಿಗೆ ಪರಿಹಾರ ಕಲ್ಪಿಸದಿದ್ದರೆ ಜು.30 ರಂದು ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು. ಕರವೇ ತಾಲೂಕು ಅಧ್ಯಕ್ಷ ಮಾದೇಶ ಸರ್ಜಾಪೂರ, ಉಪಾಧ್ಯಕ್ಷ ಬಸವರಾಜ ಪೇರಿ, ಖಜಾಂಚಿ ಮಹಾಂತೇಶ ಹೂಗಾರ, ಕಾರ್ಮಿಕ ಘಟಕದ ಅಧ್ಯಕ್ಷ ಆಂಜನೇಯ ನಾಯಕ, ಸಂಚಾಲಕ ಚಂದ್ರಶೇಖರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net