ಮೂಲ ಸೌಕರ್ಯಕ್ಕೆ ಧಕ್ಕೆಯಾಗದಂತೆ ಕ್ರಮವಹಿಸಿ

03 HANUR 3
ಮಲೆಮಹದೇಶ್ವರ ಬೆಟ್ಟದಲ್ಲಿ ಲಾಡು ತಯಾರಿಕಾ ಘಟಕಕ್ಕೆ ಶಾಸಕ ಎಂ.ಆರ್.ಮಂಜುನಾಥ್ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು. ರಘು, ಜಗೀಶ್, ರವೀಂದ್ರ ಇತರರು ಇದ್ದರು.
Published on

ಮಹದೇಶ್ವರಬೆಟ್ಟ: ಜಾತ್ರೆಗೆ ಆಗಮಿಸುವ ಭಕ್ತರಿಗೆ ಮೂಲ ಸೌಕರ್ಯಕ್ಕೆ ಸಂಬಂಸಿದಂತೆ ಯಾವುದೇ ರೀತಿಯಲ್ಲೂ ಸಮಸ್ಯೆಯಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಶಾಸಕ ಎಂ.ಆರ್.ಮಂಜುನಾಥ್ ಅಕಾರಿಗಳಿಗೆ ತಿಳಿಸಿದರು.

ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಶನಿವಾರ ಸಂಜೆ ಭೇಟಿ ನೀಡಿದ ವೇಳೆ ಮಹಾ ಶಿವರಾತ್ರಿ ಜಾತ್ರೆ ಸಿದ್ಧತೆ ಹಿನ್ನೆಲೆಯಲ್ಲಿ ಲಾಡು ತಯಾರಿಕ ಘಟಕ, ಶೌಚಗೃಹ, ಪಾರ್ಕಿಂಗ್ ಸ್ಥಳ ಹಾಗೂ ದೇಗುಲದ ಸುತ್ತಮುತ್ತಲಿನ ಆವರಣವನ್ನು ಪರಿಶೀಲಿಸಿ ಅಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದರು.

ಜಾತ್ರೆಗೆ ಲಕ್ಷಾಂತರ ಭಕ್ತರು ಭೇಟಿ ನೀಡಲಿದ್ದಾರೆ. ಹಾಗಾಗಿ ಭಕ್ತರಿಗೆ ಕುಡಿಯುವ ನೀರು, ನೆರಳು, ದಾಸೋಹ, ಶೌಚಗೃಹ ಸೇರಿದಂತೆ ಇನ್ನಿತರೆ ಅಗತ್ಯ ಸೌಕರ್ಯವನ್ನು ಒದಗಿಸಬೇಕು. ಲಾಡು ತಯಾರಿಕಾ ಘಟಕದಲ್ಲಿ ಶುಚಿತ್ವವನ್ನು ಕಾಪಾಡುವುದರ ಜತೆಗೆ ಯಾವುದೇ ಅವಘಡ ಸಂಭವಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮವನ್ನು ಅನುಸರಿಸಬೇಕು. ಭಕ್ತರ ಸಂಖ್ಯೆಗೆ ಅನುಗುಣವಾಗಿ ತಾತ್ಕಾಲಿಕ ಶೌಚಗೃಹವನ್ನು ಅಳವಡಿಸಬೇಕು. ಶೌಚಗೃಹವನ್ನು ಅಗಾಗ್ಗೆ ಶುಚಿಗೊಳಿಸುವುದರ ಮೂಲಕ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಈ ಮೂಲಕ ಜಾತ್ರೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಕಾರದ ಕಾರ್ಯದರ್ಶಿ ಎ.ಈ ರಘು, ಇನ್ಸ್‌ಪೆಕ್ಟರ್ ಜಗದೀಶ್, ನೌಕರರಾದ ಸೆಲ್ವ ಗಣಪತಿ, ರವೀಂದ್ರ ಹಾಗೂ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net