ಸರ್ಕಾರದ ಯೋಜನೆ ಸದುಪಯೋಗ ಪಡೆದುಕೊಳ್ಳಿ

19manju4
Published on

ಬೆಳಗಾವಿ: ರಾಜ್ಯ ಕಾಂಗ್ರೆಸ್​ ಸರ್ಕಾರವು ರೈತರಿಗಾಗಿ ಹಲವಾರು ಯೋಜನೆ ಜಾರಿಗೊಳಿಸಿದೆ. ಇವುಗಳ ಸದುಪಯೋಗಪಡಿಸಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷಿ$್ಮ ಹೆಬ್ಬಾಳ್ಕರ್​ ಹೇಳಿದರು.

ಬೆಳಗಾವಿ ಗ್ರಾಮೀಣ ೇತ್ರದ ಉಚಗಾಂವ ಗ್ರಾಮದಲ್ಲಿ ಪಶುಪಾಲನಾ ಮತ್ತು ಪಶು ವೈದ್ಯಕಿಯ ಸೇವಾ ಇಲಾಖೆ ಬೆಳಗಾವಿ ಇವರ ಸಂಯುಕ್ತಾಶ್ರಯದಲ್ಲಿ ಆರ್​ಐಡಿಎಫ್​&30 ರ ಯೋಜನೆಯಡಿಯಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಪಶು ಆಸ್ಪತ್ರೆ ಕಟ್ಟಡ ಕಾಮಗಾರಿಗೆ ಶನಿವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ರೈತರ ಅನುಕೂಲಕ್ಕಾಗಿ ಸರ್ಕಾರವು ಅಂದಾಜು 50 ಲ ರೂ.ಗಳ ವೆಚ್ಚದಲ್ಲಿ ಪಶು ಆಸ್ಪತ್ರೆಯ ಕಟ್ಟಡ ನಿರ್ಮಾಣಗೊಳ್ಳಲಿದೆ ಎಂದರು.

ಗ್ರಾಮೀಣ ೇತ್ರದಲ್ಲಿ ಸರ್ಕಾರದ ಎಲ್ಲ ಯೋಜನೆಗಳೂ ಸಮರ್ಪಕವಾಗಿ ಜಾರಿಯಾಗುತ್ತಿದೆ. ಇಲ್ಲಿನ ಜನರಿಗೆ ಅಭಿವೃದ್ಧಿ ಎಂದರೆ ಏನೆನ್ನುವುದು ಕಳೆದ 7 ವರ್ಷಗಳಿಂದ ಅರ್ಥವಾಗುತ್ತಿದೆ. ಹಿಂದೆಲ್ಲ ಯಾವುದೇ ಯೋಜನೆಗಳು ಮನೆಬಾಗಿಲಿಗೆ ತಲುಪುತ್ತಿರಲಿಲ್ಲ ಎಂದು ತಿಳಿಸಿದರು.

ಪಶುಪಾಲನಾ ಮತ್ತು ಮತ್ತು ಪಶು ವೈದ್ಯಕಿಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ.ರವಿ ಸಾಲಿಗೌಡರ, ಯುವರಾಜ ಕದಂ, ಯುವ ಕಾಂಗ್ರೆಸ್​ ಮುಖಂಡ ಮೃಣಾಲ್​ ಹೆಬ್ಬಾಳ್ಕರ್​, ಶಂಕರಗೌಡ ಪಾಟೀಲ, ಗ್ರಾಪಂ ಅಧ್ಯಕ್ಷ ಮಥುರಾ ತೇರಸೆ, ಉಪಾಧ್ಯ ಬಾಳಕೃಷ್ಣ ತೇರಸೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net