ಸರ್ಕಾರದ ಯೋಜನೆಗಳ ಸದುಪಯೋಗ ಪಡಿಸಿಕೊಳ್ಳಿ

27 ckm 7
ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಲಯನ್ಸ್ ಕ್ಲಬ್‌ನಿಂದ ಕೆಂಪೇಗೌಡ ಜಯಂತಿ ಹಿನ್ನೆಲೆಯಲ್ಲಿ ಕ್ಷಯ ರೋಗಿಗಳಿಗೆ ಪ್ರೋಟೀನ್ ಯುಕ್ತ ಪೌಡರ್ ವಿತರಣೆ ಮಾಡಲಾಯಿತು. ಡಾ.ಜೆ.ಪಿ.ಕೃಷ್ಣೇಗೌಡ, ಡಾ. ಹರೀಶ್ ಬಾಬು, ಕೆ.ಪುಷ್ಪರಾಜ್, ಗೋಪಿಕೃಷ್ಣ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ಐದು ಸಾವಿರ ವರ್ಷಗಳ ಇತಿಹಾಸವಿರುವ ಕ್ಷಯ ರೋಗದ ನಿಯಂತ್ರಣಕ್ಕೆ ಸರ್ಕಾರ ಹತ್ತು ಹಲವು ಯೋಜನೆಗಳನ್ನು ರೂಪಿಸಿದ್ದು, ಈ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಲಯನ್ಸ್ ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಡಾ. ಜೆ.ಪಿ. ಕೃಷ್ಣೇಗೌಡ ತಿಳಿಸಿದರು.

ನಗರದ ಜಿಲ್ಲಾಸ್ಪತ್ರೆಯಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಚಿಕ್ಕಮಗಳೂರು ಲಯನ್ಸ್ ಕ್ಲಬ್‌ನಿಂದ ಕ್ಷಯ ರೋಗದಿಂದ ಬಳಲುತ್ತಿರುವ ರೋಗಿಗಳಿಗೆ ಪ್ರೋಟಿನ್‌ಯುಕ್ತ ಪೌಡರ್ ವಿತರಣೆ ಮಾಡಿ ಮಾತನಾಡಿದ ಅವರು, ಒಂದು ಕಾಲದಲ್ಲಿ ಕ್ಷಯರೋಗ ವಾಸಿಯಾಗದ ಕಾಯಿಲೆ ಎಂಬ ಕಲ್ಪನೆ ಇತ್ತು. ಆದರೆ ಆ ಪರಿಸ್ಥಿತಿ ಈಗ ಇಲ್ಲ. ಕ್ಷಯ ರೋಗ ನಿಯಂತ್ರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ರೋಗ ನಿಯಂತ್ರಣಕ್ಕೆ ಹಲವು ಕಾರ್ಯಕ್ರಮ ರೂಪಿಸಿದೆ. ರೋಗ ಬಾಧಿತ ರೋಗಿಗಳಿಗೆ ಉತ್ತಮ ಗುಣಮಟ್ಟದ ಪ್ರೋಟೀನ್‌ಯುಕ್ತ ಆಹಾರ ಸೇವನೆಗೆ ಪ್ರತಿ ತಿಂಗಳು ೫೦೦ ರೂ. ಪ್ರೋತ್ಸಾಹ ಧನವನ್ನಾಗಿ ನೀಡುತ್ತಿದೆ. ಕ್ಷಯ ರೋಗಕ್ಕೆ ತುತ್ತಾಗಿರುವ ರೋಗಿಗಳು ಈ ಯೋಜನೆಯ ಸೌಲಭ್ಯವನ್ನು ಸದುಪಯೋಗ ಮಾಡಿಕೊಳ್ಳುವಂತೆ ಮನವಿ ಮಾಡಿದರು.
ಕ್ಷಯ ರೋಗ ನಿಯಂತ್ರಣಕ್ಕೆ ಕೇವಲ ಔಷಧ ಮುಖ್ಯವಲ್ಲ. ಈ ರೋಗಕ್ಕೆ ತುತ್ತಾದ ರೋಗಿಗಳಿಗೆ ಉತ್ತಮ ಆಹಾರ, ಒಳ್ಳೆಯ ಗಾಳಿ ಬೆಳಕು ಜೊತೆಗೆ ಉತ್ತಮ ಪರಿಸರ ಬಹಳ ಮುಖ್ಯವಾಗಿದೆ. ಈ ರೋಗವನ್ನು ಕಿತ್ತೊಗೆಯಲು ರೋಗಿಗಳು ಸೂಕ್ತ ಚಿಕಿತ್ಸೆ ಪಡೆಯುಂತೆ ತಿಳಿಸಿದರು.
ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಹರೀಶ್‌ಬಾಬು ಮಾತನಾಡಿ, ಜಿಲ್ಲೆಯಲ್ಲಿ ಈವರೆಗೆ ೪೪೦ ಕ್ಷಯ ರೋಗ ಪ್ರಕರಣಗಳು ದಾಖಲಾಗಿವೆ. ಆಯಾಯ ತಾಲೂಕು ಕೇಂದ್ರಗಳಲ್ಲಿ ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ರೋಗ ನಿಯಂತ್ರಣಕ್ಕೆ ಅಗತ್ಯ ಔಷಧಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿಯೇ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಕ್ಷಯ ರೋಗಕ್ಕೆ ತುತ್ತಾದ ರೋಗಿಗಳಿಗೆ ಇಂದು ಲಯನ್ಸ್ ಸಂಸ್ಥೆ ಪ್ರೋಟೀನ್‌ಯುಕ್ತ ಪೌಡರ್ ಉಚಿತವಾಗಿ ನೀಡುವ ಮೂಲಕ ರೋಗ ನಿಯಂತ್ರಣಕ್ಕೆ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.
ಲಯನ್ಸ್ ಕ್ಲಬ್ ಕಾರ್ಯದರ್ಶಿ ಟಿ. ನಾರಾಯಣಸ್ವಾಮಿ ಮಾತನಾಡಿ, ಸೇವೆಯನ್ನೇ ಗುರಿಯಾಗಿಟ್ಟುಕೊಂಡು ಸಮಾಜಮುಖಿ ಕೆಲಸ ಮಾಡುತ್ತಿರುವ ಲಯನ್ಸ್ ಸಂಸ್ಥೆ ನಾಡಪ್ರಭು ಕೆಂಪೇಗೌಡ ಜಯಂತಿಯAದು ಕ್ಷಯ ರೋಗಿಗಳಿಗೆ ಪ್ರೋಟೀನ್‌ಯುಕ್ತ ಪೌಡರ್ ವಿತರಣೆ ಮಾಡಲಾಗುತ್ತಿದೆ. ಕ್ಷಯ ರೋಗಿಗಳು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ರೋಗಮುಕ್ತರಾಗಬೇಕು ಎಂದರು.
ಲಯನ್ಸ್ ಕ್ಲಬ್‌ನ ನಿಯೋಜಿತ ಅಧ್ಯಕ್ಷ ಕೆ. ಪುಷ್ಪರಾಜ್, ಕಾರ್ಯದರ್ಶಿ ಗೋಪಿಕೃಷ್ಣ, ಲಯನ್ಸ್ ಮಾಜಿ ಗವರ್ನರ್ ಎಚ್.ಆರ್. ಹರೀಶ್, ಜಿಲ್ಲಾ ಕ್ಷಯ ರೋಗ ಕಾರ್ಯಕ್ರಮ ಅಧಿಕಾರಿ ಬಾಲಕೃಷ್ಣ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net