ಆರೋಗ್ಯ ಚಿಕಿತ್ಸೆ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಿ

ಅಳವಂಡಿ ಸಮೀಪದ ಕೆಸಲಾಪುರ ಗ್ರಾಮದಲ್ಲಿ ಪಿಎಚ್‌ಸಿ ಕವಲೂರು ವತಿಯಿಂದ ಸ್ವಸ್ಥ ನಾರಿ ಸಶಕ್ತ ಪರಿವಾರ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆರೋಗ್ಯ ನಿರೀಕ್ಷಣಾಧಿಕಾರಿ ಕಾಶಪ್ಪ, ಆರೋಗ್ಯ ಸುರಕ್ಷಾಧಿಕಾರಿ ಪ್ರತಿಭಾ, ಸಿಎಚ್‌ಒ ಶೋಭಾ, ನರ್ಸಿಂಗ್ ಆಫೀಸರ್ ರೇಷ್ಮಾ ಇದ್ದರು.

Published on

ಅಳವಂಡಿ: ಪ್ರತಿ ಕುಟುಂಬದ ಮಹಿಳೆಯರನ್ನು ಆರೋಗ್ಯವಂತರನ್ನಾಗಿ ಮಾಡಿ ಸಶಕ್ತ ಕುಟುಂಬ ನಿರ್ಮಿಸುವುದು ಪ್ರಧಾನ ಮಂತ್ರಿಗಳ ಆಶಯವಾಗಿದೆ ಎಂದು ಆರೋಗ್ಯ ನಿರೀಕ್ಷಣಾಧಿಕಾರಿ ಕಾಶಪ್ಪ ಹೇಳಿದರು.

ಸಮೀಪದ ಕೆಸಲಾಪುರ ಗ್ರಾಮದಲ್ಲಿ ಕವಲೂರು ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಬುಧವಾರ ಹಮ್ಮಿಕೊಂಡಿದ್ದ ಸ್ವಸ್ಥ ನಾರಿ ಸಶಕ್ತ ಪರಿವಾರ್ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರಧಾನಿ ಮೋದಿ ಇಂದು ದೇಶಾದ್ಯಂತ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಅಸಾಂಕ್ರಾಮಿಕ ಕಾಯಿಲೆಗಳಾದ ರಕ್ತದೊತ್ತಡ, ಮಧುಮೇಹ, ಕ್ಯಾನ್ಸರ್, ಅಪೌಷ್ಟಿಕತೆ, ಋತುಚಕ್ರದ ನಿರ್ವಹಣೆ, ತಪಾಸಣೆ, ಚಿಕಿತ್ಸೆ ಹಾಗೂ ಹೆಚ್ಚಿನ ಚಿಕಿತ್ಸೆಗಾಗಿ ಮೇಲ್ದರ್ಜೆ ಆಸ್ಪತ್ರೆಗೆ ಕಳಿಸುವ ಯೋಜನೆಯಾಗಿದೆ. ಆದ್ದರಿಂದ ತಾಯಂದಿರರು ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಿ ಎಂದರು.

ಆರೋಗ್ಯ ಸುರಕ್ಷಾಧಿಕಾರಿ ಪ್ರತಿಭಾ, ಸಿಎಚ್‌ಒ ಶೋಭಾ, ನರ್ಸಿಂಗ್ ಆಫೀಸರ್ ರೇಷ್ಮಾ, ಆಶಾ ಕಾರ್ಯಕರ್ತೆ ಶಾಂತಲಿಂಗಮ್ಮ, ಅಂಗನವಾಡಿ ಕಾರ್ಯಕರ್ತೆ ಕೊಟ್ರಮ್ಮ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net