ಶಿಬಿರದ ಉಪಯೋಗ ಪಡೆದುಕೊಳ್ಳಿ

ಶಿಬಿರದ ಉಪಯೋಗ ಪಡೆದುಕೊಳ್ಳಿ
Published on

ವಿರಾಜಪೇಟೆ: ಹೆಗ್ಗಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಸಮುದಾಯದತ್ತ ಕಾರ್ಯಕ್ರಮ ಮತ್ತು ಉಚಿತ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಲಾಯಿತು.

ಎಸ್‌ಡಿಎಂಸಿ ಅಧ್ಯಕ್ಷೆ ಲತಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶದ ಮಕ್ಕಳು ಶಿಬಿರದ ಸದುಪಯೋಗವನ್ನು ಪಡಿಸಿಕೊಳ್ಳಬೇಕು ಎಂದು ಹೇಳಿದರು. ಮುಖ್ಯಶಿಕ್ಷಕಿ ಕಮಲಮ್ಮ ಮಾತನಾಡಿ, ಶಿಬಿರದ ಉದ್ದೇಶ ಮತ್ತು ಮಹತ್ವದ ಕುರಿತು ವಿವರಿಸಿದರು. ಎಸ್‌ಡಿಎಂಸಿ ಸದಸ್ಯೆ ನೇತ್ರಾವತಿ, ಅಂಚೆ ಇಲಾಖೆ ಸಿಬ್ಬಂದಿ ಅಶ್ವಿನಿ ಇತರರು ಇದ್ದರು. ಮೊದಲ ದಿನ ಮಕ್ಕಳಿಗೆ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸ್ವಚ್ಛತೆಯ ಬಗ್ಗೆ ತರಬೇತಿ ನೀಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net