ಉಚಿತ ಯೋಜನೆಯ ಸದುಪಯೋಗಪಡೆದುಕೊಳ್ಳಲಿ

30sirsi5- MLA BHIMANNA NAIK
Published on

ಶಿರಸಿ: ಸರ್ಕಾರದ ಯೋಜನೆಗಳು ಯಶಸ್ವಿಯಾಗಿ ಕಾರ್ಯಗತಗೊಂಡು ಸಾರ್ವಜನಿಕರಿಗೆ ತಲುಪಬೇಕಾದಲ್ಲಿ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಸಹಕಾರ ಅತ್ಯಗತ್ಯವಾಗಿದೆ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.


ತಾಲೂಕಿನ ವಾನಳ್ಳಿ ಗ್ರಾಮ ಪಂಚಾಯಿತಿಯಲ್ಲಿ 2021-22ನೇ ಸಾಲಿನ ಬಸವ ವಸತಿ ಯೋಜನೆಯ ಹೆಚ್ಚುವರಿ ಮನೆಗಳ ಕಾಮಗಾರಿ ಆದೇಶ ಪತ್ರವನ್ನು ಮಂಗಳವಾರ ವಿತರಿಸಿ ಅವರು ಮಾತನಾಡಿದರು.


ಬಸವ ವಸತಿ ಯೋಜನೆಯಡಿ ಗ್ರಾಮೀಣ ಭಾಗದ ಮಹಿಳೆಯರು ಮನೆಗಳನ್ನು ನಿರ್ವಿುಸಿಕೊಳ್ಳುವ ಕನಸು ನನಸಾಗುತ್ತಿದೆ. ಸರ್ಕಾರದ ಉಚಿತ ಯೋಜನೆಗಳ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದರು.


ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ಮಾತನಾಡಿದರು. ಹುಲೇಕಲ್ ಗ್ರಾಮ ಪಂಚಾಯಿತಿ ಅಧ್ಯಕ್ಷ ಖಾಸಿಂ ಸಾಬ್, ಎಂಇಎಸ್ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಎಸ್.ಕೆ. ಭಾಗ್ವತ್, ಜಿ.ಪಂ. ಮಾಜಿ ಸದಸ್ಯ ಜಿ.ಎನ್. ಹೆಗಡೆ ಮುರೇಗಾರ, ವಾನಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಜಯರಾಮ ಹೆಗಡೆ, ಸದಸ್ಯರಾದ ಹರ್ಷ ಭಟ್ಟ, ಉಮಾಮಹೇಶ್ವರ ಭಟ್ಟ, ಅನುರಾಧಾ ಹೆಗಡೆ, ಮಂಜಿ ಭೋವಿ, ಗೀತಾ ಸಿದ್ದಿ ಇದ್ದರು. ವಾನಳ್ಳಿ ಗ್ರಾ.ಪಂ. ಅಧ್ಯಕ್ಷೆ ವೀಣಾ ಮಂಜುನಾಥ ಗೌಡ ಅಧ್ಯಕ್ಷತೆ ವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net