ಆರೋಗ್ಯ ಮೇಳದ ಸದುಪಯೋಗ ಪಡೆಯಿರಿ

ಮಾನ್ವಿ ತಾಲೂಕಿನ ಸಾದಾಪುರದಲ್ಲಿ ಆರೋಗ್ಯ ಮೇಳ ಕುರಿತು ಜನಜಾಗೃತಿ ಕಾರ್ಯಕ್ರಮದಲ್ಲಿ ಭಿತ್ತಿಪತ್ರಗಳನ್ನು ತಾಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ ಬಿಡುಗಡೆಗೊಳಿಸಿದರು. ಗ್ರಾಪಂ ಅಧ್ಯಕ್ಷೆ ನರಸಮ್ಮ ತಿಮ್ಮಪ್ಪ ನಾಯಕ, ಆರೋಗ್ಯ ಇಲಾಖೆಯ ಮಂಜುಳಾ, ಗುರುಶರಣ ಇತರರಿದ್ದರು.

Published on

ಮಾನ್ವಿ: ಪಟ್ಟಣದಲ್ಲಿ ಮಾ.15ರಂದು ರಾಜ್ಯಮಟ್ಟದ ಬೃಹತ್ ಆರೋಗ್ಯ ಮೇಳ ಹಮ್ಮಿಕೊಂಡಿದ್ದು, ಗ್ರಾಮಿಣ ಪ್ರದೇಶದ ಜನರು ಪಾಲ್ಗೊಂಡು ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಾಲಪ್ಪ ನಾಯಕ ಹೇಳಿದರು.

ತಾಲೂಕಿನ ಸಾದಾಪುರ ಗ್ರಾಮದಲ್ಲಿ ಮಂಗಳವಾರ ಆರೋಗ್ಯ ಮೇಳ ಕುರಿತು ಜನಜಾಗೃತಿ ಕಾರ್ಯಕ್ರಮದಲ್ಲಿ ಭಿತ್ತಿಪತ್ರಗಳನ್ನು ಬಿಡುಗಡೆ ಮಾಡಿ ಮಾತನಾಡಿದರು. ಉತ್ತಮ ಆರೋಗ್ಯ ಸೇವೆ ನೀಡುವ ಉದ್ದೇಶದಿಂದ ಆರೋಗ್ಯ ಮತ್ತು ಕುಟುಂಬ ಇಲಾಖೆಯಿಂದ ಪಟ್ಟಣದ ಬಾಷುಮಿಯ ಸರ್ಕಾರಿ ಪದವಿ ಕಾಲೇಜು ಆವರಣದಲ್ಲಿ ರಾಜ್ಯದ ಸೂಪರ್ ಸ್ಪೆಷಾಲಿಟಿ ತಜ್ಞ ವೈದ್ಯರು ವಿವಿಧ ಕಾಯಿಲೆಗಳಿಗೆ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ನೀಡಲಿದ್ದಾರೆ. ಮಹಿಳೆಯರು, ಮಕ್ಕಳು ಶಿಬಿರದಲ್ಲಿ ತಪಾಸಣೆ ಮಾಡಿಸಿಕೊಳ್ಳಿ ಎಂದರು.

ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ಉಷಾ ನಾಯ್ಡು ಮಾತನಾಡಿ, ಆರೋಗ್ಯ ಮೇಳದಲ್ಲಿ ಚಿಕಿತ್ಸೆ ಪಡೆಯಲು ಅಧಾರ್ ಕಾರ್ಡ್, ಪಡಿತರ ಚೀಟಿ, ಮೊಬೈಲ್ ಸಂಖ್ಯೆಯೊಂದಿಗೆ ಈ ಹಿಂದೆ ಚಿಕಿತ್ಸೆ ಪಡೆದ ಅಗತ್ಯ ವಿವರ ತರಬೇಕು. ಆರೋಗ್ಯ ಮೇಳ ನಡೆಯುವ ಸ್ಥಳಕ್ಕೆ ಸಾರಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು. ಗ್ರಾಪಂ ಅಧ್ಯಕ್ಷೆ ನರಸಮ್ಮ ತಿಮ್ಮಪ್ಪ ನಾಯಕ, ಆರೋಗ್ಯ ಇಲಾಖೆಯ ಮಂಜುಳಾ, ಗುರುಶರಣ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net