ತೊಗರಿ ಬೆಂಬಲ ಬೆಲೆ ಖರೀದಿ ಕೇಂದ್ರದ ಪ್ರಯೋಜನ ಪಡೆದುಕೊಳ್ಳಿ

bbgd togari kendra
ಬಸವನಬಾಗೇವಾಡಿ ಪಟ್ಟಣದ ಎಪಿಎಂಸಿ ಮಾರುಕಟ್ಟೆಯ ಉಗ್ರಾಣದಲ್ಲಿ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದಿಂದ ತೊಗರಿ ಬೆಂಬಲ ಬೆಲೆ ಖರೀದಿ ಕೇಂದ್ರದ ಚಾಲನಾ ಕಾರ್ಯಕ್ರಮದಲ್ಲಿ ಅಧ್ಯಕ್ಷ ಚಂದ್ರಶೇಖರಗೌಡ ಪಾಟೀಲ ಮಾತನಾಡಿದರು. ಶಿವನಗೌಡ ಬಿರಾದಾರ, ರವಿ ರಾಠೋಡ, ಲೋಕನಾಥ ಅಗರವಾಲ ಇತರರಿದ್ದರು.
Published on

ಬಸವನಬಾಗೇವಾಡಿ: ಕೇಂದ್ರ, ರಾಜ್ಯ ಸರ್ಕಾರ ರೈತರ ತೊಗರಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲಾಗುತ್ತಿದ್ದು, ತಾಲೂಕಿನ ರೈತರು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ತಾಲೂಕು ಒಕ್ಕುಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಅಧ್ಯಕ್ಷ ಚಂದ್ರಶೇಖರಗೌಡ ಪಾಟೀಲಹೇಳಿದರು.

ಪಟ್ಟಣದ ಎಪಿಎಂಸಿ ಮಾರುಕಟ್ಟೆಯ ಉಗ್ರಾಣದಲ್ಲಿ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದಿಂದ ತೊಗರಿ ಬೆಂಬಲ ಬೆಲೆ ಖರೀದಿ ಕೇಂದ್ರದ ಚಾಲನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ತಾಲೂಕಿನ ರೈತರು ತಮ್ಮ ಜಮೀನಿನಲ್ಲಿ ಬೆಳೆದ ತೊಗರಿಯನ್ನು ಈ ಕೇಂದ್ರದಲ್ಲಿ ಬೆಂಬಲ ಬೆಲೆಗೆ ನೀಡಬೇಕೆಂದು ತಿಳಿಸಿದರು.

ಪ್ರತಿ ಎಕರೆಗೆ 4 ಕ್ವಿಂಟಾಲ್‌ನಂತೆ ಒಟ್ಟು 40 ಕ್ವಿಂಟಾಲ್ ತೊಗರಿಯನ್ನು ಪ್ರತಿ ರೈತನಿಂದ ಖರೀದಿಸಲು ಸರ್ಕಾರ ಆದೇಶಿಸಿದ್ದು, ಈಗಾಗಲೇ 1200 ರೈತರು ನೋಂದಣಿ ಮಾಡಿಕೊಂಡಿದ್ದಾರೆ. ಹೆಸರು ನೋಂದಾವಣೆಗೆ ಇನ್ನೂ ಕಾಲಾವಕಾಶವಿದ್ದು, ರೈತರು ಇದರ ಲಾಭ ಪಡೆದುಕೊಳ್ಳಬೇಕು ಎಂದರು.

ಕೃಷಿಕ ಸಮಾಜದ ಜಿಲ್ಲಾಧ್ಯಕ್ಷ, ತಾಲೂಕು ಒಕ್ಕುಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ನಿರ್ದೇಶಕ ಶಿವನಗೌಡ ಬಿರಾದಾರ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿ, ಪ್ರಸಕ್ತ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ತೊಗರಿಗೆ ಬೆಂಬಲ ಬೆಲೆ ಘೋಷಣೆ ಮಾಡಿ ರೈತರ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಶ್ರಮಿಸುತ್ತಿದೆ ಎಂದರು.

ಬೆಂಬಲ ಬೆಲೆ ಯೋಜನೆಯಡಿ ಕೇಂದ್ರ ಸರ್ಕಾರ 7,550 ರೂ. ರಾಜ್ಯ ಸರ್ಕಾರದ ಪ್ರೋತ್ಸಾಹ ಧನ 450 ರೂ. ರೈತರಿಗೆ ಪ್ರತಿ ಕ್ವಿಂಟಾಲ್‌ಗೆ 8 ಸಾವಿರ ರೂ. ನೀಡಲಾಗುವುದು ಎಂದು ತಿಳಿಸಿದರು.

ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಉಪಾಧ್ಯಕ್ಷ ಶಿವಪ್ಪ ಬಂಚೋಡಿ, ನಿರ್ದೇಶಕರಾದ ರವಿ ರಾಠೋಡ, ಬಸವೇಶ್ವರ ಬ್ಯಾಂಕ್ ಅಧ್ಯಕ್ಷ ಲೋಕನಾಥ ಅಗರವಾಲ, ತಾಲೂಕು ದಂಡಾಧಿಕಾರಿ ಯಮನಪ್ಪ ಸೋಮನಕಟ್ಟಿ, ಡಿವೈಎಸ್‌ಪಿ ಬಲಪ್ಪ ನಂದಗಾವಿ, ರಾಷ್ಟ್ರೀಯ ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ, ಕಾಂಗ್ರೆಸ್ ಪಕ್ಷದ ನಗರ ಘಟಕದ ಅಧ್ಯಕ್ಷ ಸುರೇಶಗೌಡ ಪಾಟೀಲ, ಎಪಿಎಂಸಿ ಮಾಜಿ ಅಧ್ಯಕ್ಷ ಶೇಖರ ಗೊಳಸಂಗಿ, ಮುಖಂಡರಾದ ಬಸವರಾಜ ಹಾರಿವಾಳ, ಎಂ.ಬಿ. ಆದಿಗೊಂಡ, ಬಸವರಾಜ ಗೊಳಸಂಗಿ, ಡಾ. ಬಸವರಾಜ ಕೋಟಿ, ಸಂಗನಗೌಡ ಚಿಕ್ಕೊಂಡ, ಜಗದೇವಿ ಗುಂಡಳ್ಳಿ, ಬಸವರಾಜ ತುಂಬಗಿ, ಸಂಕನಗೌಡ ಪಾಟೀಲ, ಪ್ರವೀಣ ಪೂಜಾರಿ, ಸಂಘದ ವ್ಯವಸ್ಥಾಪಕಿ ಕಸ್ತೂರಿ ಪಟ್ಟಣಶೆಟ್ಟಿ, ಸದಾನಂದ ಸಜ್ಜನ, ಶಿವಾನಂದ ಪಡಶೆಟ್ಟಿ, ಎಪಿಎಂಸಿ ಅಧಿಕಾರಿ ಎಸ್.ಎಸ್. ಮನಗೂಳಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net