ನೀರಿನ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಿ

25blh2 tp news
Published on

ಬೈಲಹೊಂಗಲ: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಾವಿ, ಬೋರ್​ವೇಲ್​ಗಳ ವಸ್ತು ಸ್ಥಿತಿ ಅರಿತು ಯಾವುದೇ ತರಹದ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುಂಜಾಗ್ರತೆ ಕ್ರಮಕೈಗೊಳ್ಳಬೇಕು ಎಂದು ಶಾಸಕ ಮಹಾಂತೇಶ ಕೌಜಲಗಿ ಸೂಚಿಸಿದರು.

ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಗ್ರಾಮ ಪಂಚಾಯಿತಿ ಅಧ್ಯರು ಹಾಗೂ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಜಾತ್ರೆ, ಉತ್ಸವ ನಡೆಯುತ್ತಿವೆ. ಹೀಗಾಗಿ, ಎಲ್ಲ ಗ್ರಾಮಗಳಲ್ಲಿ ಬೋರ್​ವೆಲ್​ ದುರಸ್ತಿಗೊಳಿಸಿ ಕುಡಿಯುವ ನೀರಿನ ಟ್ಯಾಂಕ್​ ಮತ್ತು ಟ್ಯಾಂಕರ್​ ಸ್ವಚ್ಛಗೊಳಿಸಬೇಕು. ಜತೆಗೆ ಕಡ್ಡಾಯವಾಗಿ ನೀರಿನ ಗುಣಮಟ್ಟ ಪರೀಸಬೇಕು ಎಂದು ತಿಳಿಸಿದರು.

ಗ್ರಾಮಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅನಧಿಕೃತ ಕುಡಿಯುವ ನೀರಿನ ನಲ್ಲಿಗಳ ತೆರವು, ನೀರು ಪೋಲಾಗುವುದನ್ನು ತಡೆಯುವುದು ಹಾಗೂ ಸಾಂಕ್ರಾಮಿಕ ರೋಗ ಹರಡದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿ-ಕಾರಿಗಳಿಗೆ ಶಾಸಕರು ನಿರ್ದೇಶನ ನೀಡಿದರು.

ತಹಸೀಲ್ದಾರ್​ಗಳಾದ ಹನುಮಂತ ಶಿರಹಟ್ಟಿ, ಮಲ್ಲಿಕಾರ್ಜುನ ಹೆಗ್ಗಣ್ಣವರ, ತಾಪಂ ಇಒ ಆನಂದ ಬಡಕುಂದ್ರಿ, ತಾಲೂಕುಮಟ್ಟದ ಅಧಿಕಾರಿಗಳು, ಗ್ರಾಪಂ ಅಧ್ಯರು ಹಾಗೂ ಪಿಡಿಒಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net