ಆರೋಗ್ಯದ ಬಗ್ಗೆ ಕಾಳಜಿ ವಹಿಸಿರಿ

ಆರೋಗ್ಯದ ಬಗ್ಗೆ ಕಾಳಜಿ ವಹಿಸಿರಿ
Published on

ಮದ್ದೂರು: ತಾಲೂಕಿನ ಕೆಸ್ತೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರೋಟರಿ ಸಂಸ್ಥೆ ಮದ್ದೂರು, ಶ್ರೀ ಚಾಮುಂಡೇಶ್ವರಿ ಆಸ್ಪತ್ರೆ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಶುಕ್ರವಾರ ಆರೋಗ್ಯ ಉಚಿತ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.

ರೋಟರಿ ಅಧ್ಯಕ್ಷ ಎಂ.ಸಿ.ಶಶಿಗೌಡ ಮಾತನಾಡಿ, ಮನುಷ್ಯನಿಗೆ ಹಣಕ್ಕಿಂತ ಆರೋಗ್ಯ ಮುಖ್ಯವಾಗಿದ್ದು, ಆರೋಗ್ಯ ಚೆನ್ನಾಗಿದ್ದರೆ ಏನು ಬೇಕಾದರೂ ಸಾಧಿಸಬಹುದು. ಹೀಗಾಗಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದರು.

ಶಿಬಿರದಲ್ಲಿ ಕೆಸ್ತೂರು ಸುತ್ತಮುತ್ತಲಿನ 400ಕ್ಕೂ ಹೆಚ್ಚಿನ ಜನರು ತಪಾಸಣೆಗೊಳಗಾದರು. ರೋಟರಿ ಕಾರ್ಯದರ್ಶಿ ಎಚ್.ಪಿ. ಚನ್ನಂಕೇಗೌಡ, ಖಜಾಂಚಿ ವಿ.ಹರೀಶ್‌ಬಾಬು, ಚಾಮುಂಡೇಶ್ವರಿ ಆಸ್ಪತ್ರೆಯ ಡಾ.ಶೀತಲ್, ರೋಟರಿ ಸಂಸ್ಥೆಯ ಶಶಿಧರ್, ಸ್ವಾಮಿ, ಕದಲೂರು ಲೋಕೇಶ್, ಬಸವರಾಜು, ತಿಪ್ಪೂರು ರಾಜೇಶ್, ಮಂಜುನಾಥನಾಯ್ಡು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net