ಹೃದಯದ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ

Heart Feature
Published on

ಮೈಸೂರು: ಕಾರ್ಡಿಯೋಲಾಜಿಕಲ್ ಸೊಸೈಟಿ ಆಫ್ ಇಂಡಿಯಾ ಮೈಸೂರು ಘಟಕ ವತಿಯಿಂದ ಅ.16 ರಂದು ಜೆಕೆ ಮೈದಾನದಲ್ಲಿ ಬೆಳಗ್ಗೆ 10ಕ್ಕೆ ವಿಶ್ವ ಹೃದಯ ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಡಾ.ಪಿ.ಜಯಕುಮಾರ್ ಹೇಳಿದರು.

ಜನರಲ್ಲಿ ಹೃದಯದ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಹೃದಯ ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಉತ್ತಮ ಜೀವನಶೈಲಿಯನ್ನು ಅಳವಡಿಸಿಕೊಂಡರೆ ಹೃದ್ರೋಗ ಸಾಧ್ಯತೆಯನ್ನು ಕಡಿಮೆ ಮಾಡಬಹುದು. ಹೃದ್ರೋಗ ಬಂದ ನಂತರ ಚಿಕಿತ್ಸೆ ಪಡೆಯುವ ಬದಲು ಹೃದ್ರೋಗ ಬಾರದ ಹಾಗೆ ತಡೆಯುವುದು ಮುಖ್ಯ. ಈ ನಿಟ್ಟಿನಲ್ಲಿ ಜನರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ನಮ್ಮ ಸಂಸ್ಥೆ ಮಾಡುತ್ತಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಎಚ್. ಪ್ರಸಾದ್, ಮೈಸೂರು ವೈದ್ಯಕೀಯ ಕಾಲೇಜಿನ ನಿರ್ದೇಶಕ ಡಾ.ಕೆ.ಆರ್. ದಾಕ್ಷಾಯಿಣಿ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳಾದ ಡಾ. ಡಿ. ಶಶಿರೇಖಾ, ಡಾ.ಎಂ.ಆರ್. ಜಯಶೀಲನ್, ಡಾ.ಎಂ. ಮಂಜಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net