ಕಣ್ಣಿನ ಆರೋಗ್ಯದ ಕಾಳಜಿ ವಹಿಸಿ

11spt1
Published on

ಸೋಮವಾರಪೇಟೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂದತ್ವ ನಿಯಂತ್ರಣ ಸಂಸ್ಥೆ ಕೊಡಗು, ಗೌಡಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ, ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ವತಿಯಿಂದ ನೇತ್ರ ಉಚಿತ ತಪಾಸಣಾ ಶಿಬಿರ ಕಾಗಡಿಕಟ್ಟೆ ಆಯುಷ್ಮಾನ್ ಆರೋಗ್ಯ ಮಂದಿರದಲ್ಲಿ ಶುಕ್ರವಾರ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಗೋಪಾಲಕೃಷ್ಣ, ಕಣ್ಣಿನ ಅರೋಗ್ಯದ ಬಗ್ಗೆ ಪ್ರತಿಯೊಬ್ಬರೂ ಕಾಳಜಿ ವಹಿಸಿಕೊಳ್ಳಬೇಕು. ಅದರಲ್ಲೂ ವಯಸ್ಸಾಗಿದ್ದು ದೃಷ್ಟಿ ದೋಷವಿದ್ದವರು, ತಜ್ಞ ವೈದ್ಯರೊಂದಿಗೆ ಪರೀಕ್ಷೆ ಮಾಡಿಸಿಕೊಳ್ಳಬೇಕು. ಎಲ್ಲ ಕಡೆ ನೇತ್ರ ಚಿಕಿತ್ಸೆ ಉಚಿತವಾಗಿರುತ್ತದೆ. ಗ್ರಾಮೀಣ ಭಾಗದಲ್ಲಿ ನೇತ್ರ ಚಿಕಿತ್ಸಾ ಶಿಬಿರಗಳು ಆಯೋಜನೆಗೊಂಡಾಗ ಸಮಸ್ಯೆಯಿದ್ದವರು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪಂಚಾಯಿತಿ ಸದಸ್ಯ ಶಂಕರ್, ಸಿಬ್ಬಂದಿ ವಿಶ್ವರೂಪಾಚಾರ್, ಹಾಸನ ಅಮ್ಮ ಕಣ್ಣಿನ ಆಸ್ಪತ್ರೆಯ ವೈದ್ಯರಾದ ಪ್ರೀತಿ, ಅಪೂರ್ವ, ಆಶಾ ಕಾರ್ಯಕರ್ತೆಯರಾದ ಈಶ್ವರಿ, ಉಷಾ, ಶೈಲಾ ವಸಂತ್ ಇದ್ದರು.

ಚಿತ್ರ:11ಎಸ್‌ಪಿಟಿ1-ಸೋಮವಾರಪೇಟೆ ಸಮೀಪದ ದೊಡ್ಡಮಳ್ತೆಯ ಕಾಗಡಿಕಟ್ಟೆ ಆಯುಷ್ಮಾನ್ ಅರೋಗ್ಯ ಮಂದಿರದಲ್ಲಿ ನಡೆದ ನೇತ್ರ ತಪಾಸಣಾ ಶಿಬಿರದಲ್ಲಿ ವೈದ್ಯರು ನೇತ್ರ ಪರೀಕ್ಷೆ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net