ಕಣ್ಣಿನ ಆರೋಗ್ಯದ ಕಡೆಗೆ ನಿಗಾ ವಹಿಸಿ

ಆಲೂರು ಸಿದ್ದಾಪುರ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಕಣ್ಣಿನ ತಪಾಸಣೆ ಉಚಿತ ಶಿಬಿರದಲ್ಲಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಸುಪರ್ಣಾ ಮಾತನಾಡಿದರು. ಪ್ರವೀಣ್‌ಕುಮಾರ್, ಅಭಿಷೇಕ್, ಪೂಜಾ, ವಿದ್ಯಾ ಇತರರಿದ್ದರು.
ಆಲೂರು ಸಿದ್ದಾಪುರ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಕಣ್ಣಿನ ತಪಾಸಣೆ ಉಚಿತ ಶಿಬಿರದಲ್ಲಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಸುಪರ್ಣಾ ಮಾತನಾಡಿದರು. ಪ್ರವೀಣ್‌ಕುಮಾರ್, ಅಭಿಷೇಕ್, ಪೂಜಾ, ವಿದ್ಯಾ ಇತರರಿದ್ದರು.
Published on

ಶನಿವಾರಸಂತೆ: ಆಲೂರುಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬುಧವಾರ ಉಚಿತ ಕಣ್ಣಿನ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿತ್ತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಮಡಿಕೇರಿ, ಅಮ್ಮ ಚಾರಿಟಬಲ್ ಟ್ರಸ್ಟ್ ಹಾಗೂ ಆಲೂರುಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಹಾಸನದ ಅಮ್ಮ ಕಣ್ಣಿನ ಆಸ್ಪತ್ರೆ ಮತ್ತು ರೆಟಿನಾಕೇರ್ ಸೆಂಟರ್ ಸಹಯೋಗದಲ್ಲಿ ಶಿಬಿರ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಆಲೂರುಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಸುಪರ್ಣಾ ಕೃಷ್ಣಾನಂದ್, ಪ್ರತಿಯೊಬ್ಬರೂ ಕಣ್ಣಿನ ಆರೋಗ್ಯದ ಕಡೆಗೆ ನಿಗಾ ವಹಿಸಬೇಕು ಸಾಮಾನ್ಯವಾಗಿ ನಡು ವಯಸ್ಕರಿಂದ ಹಿರಿಯ ನಾಗರಿಕರವರೆಗೆ ಬಿಪಿ, ಶುಗರ್ ಸಮಸ್ಯೆಗಳಿರುವುದರಿಂದ ಇದು ಕಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬೀರುವುದಲ್ಲದೆ ಕಣ್ಣಿನ ಪೊರೆ ಮತ್ತು ಅಂಧತ್ವ ಸಮಸ್ಯೆ ಉಂಟಾಗಬಹುದು. ಈ ನಿಟ್ಟಿನಲ್ಲಿ ಪರೀಕ್ಷೆ ಮಾಡಿಸಿಕೊಳ್ಳುವುದರಿಂದ ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಹೇಳಿದರು.

ಆರೋಗ್ಯ ಇಲಾಖೆ ಅಂಧತ್ವ ಸಮಸ್ಯೆ ನಿವಾರಣೆಗೋಷ್ಕರವಾಗಿ ಉಚಿತ ಕಣ್ಣಿನ ತಪಾಸಣೆ ಶಿಬಿರವನ್ನು ಹಮ್ಮಿಕೊಂಡು ಕಣ್ಣಿನ ಪೊರೆ ಸಮಸ್ಯೆ ಇರುವ ಫಲಾನುಭವಿಗಳನ್ನು ಗುರುತಿಸಿ ಅವರನ್ನು ಹತ್ತಿರದಲ್ಲಿರುವ ಕಣ್ಣಿನ ಆಸ್ಪತ್ರೆಗೆ ಕೊಂಡೊಯ್ದು ಉಚಿತವಾಗಿ ಶಸ್ತ್ರಚಿಕಿತ್ಸೆಗೆ ವ್ಯವಸ್ಥೆ ಮಾಡಿಕೊಡಲಾಗುತ್ತದೆ. ಅದರಂತೆ ಈ ಶಿಬಿರದಲ್ಲೂ ಪಲಾನುಭವಿಗಳನ್ನು ಗುರುತಿಸಿ ಹಾಸನದ ಅಮ್ಮ ಕಣ್ಣಿನ ಆಸ್ಪತ್ರೆಗೆ ಕೊಂಡೊಯ್ದು ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಮಾಡಿಸಲಾಗುತ್ತದೆ. ಈ ನಿಟ್ಟಿನಲ್ಲಿ ಕಣ್ಣಿನ ಸಮಸ್ಯೆ ಇರುವವರು ಶಿಬಿರದ ಲಾಭವನ್ನು ಪಡೆದುಕೊಳ್ಳುವಂತೆ ಮನವಿ ಮಾಡಿದರು. ವೇದಿಕೆಯಲ್ಲಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಪ್ರವೀಣ್ ಕುಮಾರ್, ಹಾಸನದ ಅಮ್ಮ ಕಣ್ಣಿನ ಆಸ್ಪತ್ರೆಯ ನೇತ್ರಾ ಪರೀಕ್ಷರಾದ ಪೂಜಾ, ವಿದ್ಯಾ, ಅಭಿಷೇಕ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net