ಆರೋಗ್ಯದ ಬಗ್ಗೆ ಕಾಳಜಿ ವಹಿಸಿ

8 nrp 1
Published on

ಎನ್.ಆರ್.ಪುರ: ವಿದ್ಯಾರ್ಥಿಗಳು ಆರೋಗ್ಯ ರಸ ಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗವಹಿಸುವುದರಿಂದ ಆರೋಗ್ಯದ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು ಎಂದು ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಅಧ್ಯಕ್ಷ ಕೆ.ಆರ್.ನಾಗರಾಜ ಪುರಾಣಿಕ್ ಹೇಳಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆರೋಗ್ಯ ಇಲಾಖೆ, ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ಸಂಸ್ಥೆ ಆಶ್ರಯದಲ್ಲಿ ನಡೆದ ಆರೋಗ್ಯ ರಸ ಪ್ರಶ್ನೆ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರತಿಯೊಬ್ಬರೂ ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು. ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಸಂಸ್ಥೆ ಸಾಮಾಜಿಕ ಕಾರ್ಯಕ್ರಮಗಳಿಗೆ ಸದಾ ಬೆಂಬಲ ನೀಡುತ್ತಿದೆ ಎಂದರು.

ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಪಿ.ಪಿ.ಬೇಬಿ ಮಾತನಾಡಿ, ವಿದ್ಯಾರ್ಥಿಗಳಿಗೆ ಆರೋಗ್ಯದ ಬಗ್ಗೆ ಹೆಚ್ಚು ಮಾಹಿತಿ ನೀಡಬೇಕು ಎಂಬ ಉದ್ದೇಶದಿಂದ ತಾಂತ್ರಿಕ ಹಾಗೂ ಪದವಿ ವಿದ್ಯಾರ್ಥಿಗಳಿಗೆ ರಸ ಪ್ರಶ್ನೆ ಕಾರ್ಯಕ್ರಮ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ರಸ ಪ್ರಶ್ನೆಯಲ್ಲಿ ಗೆದ್ದ ತಂಡಗಳಿಗೆ ನಗದು ಪುರಸ್ಕಾರ ನೀಡಲಾಗುವುದು ಎಂದು ಹೇಳಿದರು. ಪ್ರಚಾರ್ಯ ಡಾ.ಧನಂಜಯ್ ಮಾತನಾಡಿ, ಆರೋಗ್ಯ ಇಲಾಖೆಯ ರಸಪ್ರಶ್ನೆ ಸ್ಪರ್ಧೆಯಿಂದ ಕಾಲೇಜಿನ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತಿದೆ. ಇಂತಹ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಬೇಕು ಎಂದು ಕರೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net