

ಸಿರಗುಪ್ಪ: ಆರೋಗ್ಯವೇ ಮಹಾಭಾಗ್ಯ ಎನ್ನುವ ಅಂಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದು ಸಿವಿಲ್ ನ್ಯಾಯಾಧೀಶ ಆರ್.ಎಚ್.ಅಶೋಕ ಹೇಳಿದರು.
ಇದನ್ನೂ ಓದಿ:ದಂತ ತಪಾಸಣೆ, ಚಿಕಿತ್ಸಾ ಶಿಬಿರ
ಪಟ್ಟಣದ ವಕೀಲರ ಭವನದಲ್ಲಿ ತಾಲೂಕು ಕಾನೂನು ಸೇವಾ ಸಮಿತಿಯಿಂದ ಬುಧವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಆಯುಷ್ ಅಭಿಯಾನದಡಿ ನ್ಯಾಯಾಧೀಶರಿಗೆ, ವಕೀಲರಿಗೆ, ಕಕ್ಷಿದಾರರಿಗೆ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಜನರು ಆರೋಗ್ಯಲೆಕ್ಕಿಸದೇ ದುಡಿಮೆ ಕಡೆ ಗಮನ ಹರಿಸುತ್ತಿದ್ದಾರೆ. ಇದರಿಂದ ಅನಾರೋಗ್ಯಕಕ್ಕೆ ತುತ್ತಾಗಿ ಆಸ್ಪತ್ರೆಗಳಿಗೆ ಹಣ ಪಾವತಿಸುತ್ತಿದ್ದಾರೆ. ಸರಿಯಾದ ಸಮಯಕ್ಕೆ ಊಟ ಮಾಡದೇ ಒತ್ತಡದಿಂದ ಕೆಲಸ ನಿರ್ವಹಿಸುವಾಗ ಅಧಿಕ ರಕ್ತದೊತ್ತಡ, ಸಕ್ಕರೆ ಕಾಯಿಲೆ, ಹೃದಯಾಘಾತದ ಸಂಭವ ಹೆಚ್ಚಿರುತ್ತದೆ. ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಕಾಳಜಿ ವಹಿಸಲಿ ಎಂದರು.
ವಕೀಲರ ಸಂಘದ ತಾಲೂಕು ಅಧ್ಯಕ್ಷ ಉಪ್ಪಾರ ವೆಂಕೋಬ, ಸಹಾಯಕ ಸರ್ಕಾರಿ ಅಭಿಯೋಜಕ ಶಿವರಾಜ, ಕಾರ್ಯದರ್ಶಿ ಎಂ.ಶಿವಕುಮಾರ್, ವೈದ್ಯಾಧಿಕಾರಿ ಫಣೀಂದ್ರ, ಡಾ.ರಾಘವೇಂದ್ರ, ಡಾ.ಪರಶುರಾಮ, ಡಾ.ಸುಜಾತಾ, ಡಾ.ಅಶೋಕ ಹವಳದ, ಡಾ.ಎಸ್.ನಾಗರಾಜ, ವಕೀಲರು, ಸಿಬ್ಬಂದಿ ಇತರರಿದ್ದರು.