

ಲೋಕಾಪೂರ: ಪಿಯುಸಿ ಪರೀಕ್ಷೆ ಲಿತಾಂಶ ಸುಧಾರಿಸಲು ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಪಾಲಕರು ಸಂಘಟಿತ ಪ್ರಯತ್ನ ಮಾಡಿದರೆ ಉತ್ತಮ ಲಿತಾಂಶ ಪಡೆಯಲು ಸಾಧ್ಯ ಎಂದು ಬಿಜಿಎಚ್‌ಎಸ್ ಮುಖ್ಯಶಿಕ್ಷಕ ಎಸ್.ಬಿ. ಪಾಟೀಲ ಹೇಳಿದರು.
ಪಟ್ಟಣದ ಬಿವಿವಿ ಸಂಘದ ಬಿವಿವಿಎಸ್ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ರಾಜ್ಯಶಾಸ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ದ್ವಿತೀಯ ಪಿಯು ಎನ್ನುವುದು ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟವಾಗಿದ್ದು, ಸರಿಯಾದ ವೇಳಾಪಟ್ಟಿ ತಯಾರಿಸಿಕೊಂಡು ಅಭ್ಯಾಸ ಮಾಡಬೇಕು. ಓದಿನ ಜತೆಗೆ ಆರೋಗ್ಯದ ಕಡೆಗೂ ಗಮನವಹಿಸಬೇಕು ಎಂದರು.
ಪ್ರಾಚಾರ್ಯ ಎಸ್.ಎಂ. ಹುದ್ದಾರ ಅಧ್ಯಕ್ಷತೆ ವಹಿಸಿ ಮಾತನಾಡಿ, ಪಾಲಕರು ತಮ್ಮ ಜವಾಬ್ದಾರಿ ಅರಿತು ಮಕ್ಕಳ ಕಡೆಗೆ ಗಮನಹರಿಸಬೇಕು. ಶಿಕ್ಷಕರು ಶೈಕ್ಷಣಿಕವಾಗಿ ಹಿಂದುಳಿದ ವಿದ್ಯಾರ್ಥಿಗಳನ್ನು ಗುರುತಿಸಿ ಅವರಲ್ಲಿ ಧನಾತ್ಮಕ ಮನೋಭಾವ ಬೆಳೆಸಬೇಕು ಎಂದರು.
ಉಪನ್ಯಾಸಕ ವಿ.ವಿ. ಗೊಬ್ಬನ್ನವರ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತಯಾರಾಗುವ ವಿಧಾನಗಳ ಕುರಿತು, ಉತ್ತರಗಳನ್ನು ಬರೆಯುವ ರೀತಿ, ಸಮಯದ ಬಗ್ಗೆ ಗಮನ ಮತ್ತಿತರರ ವಿಷಯಗಳ ಬಗ್ಗೆ ಉಪನ್ಯಾಸ ನೀಡಿದರು. ಹಿರೇಮಠದ ಡಾ. ಚಂದ್ರಶೇಖರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಎಸ್.ಎಸ್. ಬದ್ರನ್ನವರ, ಎ.ಸಿ. ಗಣಾಚಾರಿ ಮತ್ತಿತರರಿದ್ದರು. ಉಪನ್ಯಾಸಕಿ ವೈ.ಐ. ಜಂಬಗಿ ನಿರೂಪಿಸಿದರು.