ಮಕ್ಕಳಲ್ಲಿ ಅಪೌಷ್ಟಿಕತೆ ಕಾಡದಂತೆ ಎಚ್ಚರ ವಹಿಸಿ

17Kush05
ಕೂಡಿಗೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಹಾಸನದ ಅಮ್ಮ ಆಸ್ಪತ್ರೆಯ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ನೇತ್ರ ತಪಾಸಣಾ ಶಿಬಿರದಲ್ಲಿ ನೇತ್ರಗಳ ಜಾಗೃತಿ ಮೂಡಿಸುವ ಭಿತ್ತಿಪತ್ರಗಳನ್ನು ಪ್ರದರ್ಶಿಸಲಾಯಿತು. ಬಾಸ್ಕರ್ ನಾಯಕ್, ಇಂದೂಧರ, ಎಚ್.ಕೆ.ಶಾಂತಿ, ಫಿಲೋಮಿನಾ, ಡಾ.ತೇಜಸ್ವಿನಿ ಇತರರು ಇದ್ದರು.
Published on

ಕುಶಾಲನಗರ: ಮಕ್ಕಳಲ್ಲಿ ಅಪೌಷ್ಟಿಕತೆ ಕಾಡದಂತೆ ಎಚ್ಚರ ವಹಿಸಿದಲ್ಲಿ ಅವರ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ ನಾಯಕ್ ತಿಳಿಸಿದರು.

ಕೂಡಿಗೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಹಾಸನದ ಅಮ್ಮ ಆಸ್ಪತ್ರೆಯ ಸಹಯೋಗದೊಂದಿಗೆ ಶುಕ್ರವಾರ ಆಯೋಜಿಸಲಾಗಿದ್ದ ನೇತ್ರ ತಪಾಸಣಾ ಉಚಿತ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಬಾಲ್ಯದಿಂದಲೇ ಮಕ್ಕಳು ಅತಿಯಾಗಿ ಮೊಬೈಲ್ ನೋಡುವುದರಿಂದ ಕಣ್ಣಿನ ದೃಷ್ಟಿ ಕಳೆದುಕೊಳ್ಳುವ ಸಾಧ್ಯತೆ ಇರುತ್ತದೆ. ಆದ್ದರಿಂದ ಪಾಲಕರು ಗಮನಹರಿಸಬೇಕು. ಕಣ್ಣು ಮನುಷ್ಯನ ಬಹಳ ಮುಖ್ಯವಾದ ಅಂಗವಾಗಿದ್ದು ಅದನ್ನು ಜೋಪಾನ ಮಾಡಬೇಕಾದದ್ದು ಪ್ರತಿಯೊಬ್ಬರ ಕರ್ತವ್ಯ ಎಂದು ತಿಳಿಸಿದರು.

ತಾಲೂಕು ವೈದ್ಯಾಧಿಕಾರಿ ಇಂದೂಧರ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಚ್.ಕೆ.ಶಾಂತಿ, ಗ್ರಾಮ ಪಂಚಾಯಿತಿ ಸದಸ್ಯೆ ಫಿಲೋಮಿನಾ, ವೈದ್ಯೆ ಡಾ.ತೇಜಸ್ವಿನಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net