ಎಡಿಜಿಪಿ ವಿರುದ್ಧ ಕಾನೂನು ಕ್ರಮ ಜರುಗಿಸಿ

TKE manavi
ತರೀಕೆರೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಗ್ರೇಡ್-2 ತಹಸೀಲ್ದಾರ್ ನೂರುಲ್ಲಹುದಾ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಎಂ.ನರೇಂದ್ರ, ಮಂಜುನಾಥ್, ದೇವೇಗೌಡ ಇತರರಿದ್ದರು.
Published on

ತರೀಕೆರೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಲೋಕಾಯುಕ್ತ ವಿಶೇಷ ತನಿಖಾ ದಳದ ಎಡಿಜಿಪಿ ಚಂದ್ರಶೇಖರ್ ನಿಂದಿಸಿರುವುದು ಮಾತ್ರವಲ್ಲ, ಅಸಾಂವಿಧಾನಿಕ ಶಬ್ದ ಬಳಸಿದ್ದಾರೆಂದು ಆರೋಪಿಸಿ ತಾಲೂಕು ಜೆಡಿಎಸ್ ಪದಾಧಿಕಾರಿಗಳು ಮಂಗಳವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ತಾಲೂಕು ಜೆಡಿಎಸ್ ಅಧ್ಯಕ್ಷ ಎಂ.ನರೇಂದ್ರ ಮಾತನಾಡಿ, ಸರ್ಕಾರಿ ಅಧಿಕಾರಿ ರಾಜಕೀಯ ಪಕ್ಷದ ಮುಖಂಡರಂತೆ ಹೇಳಿಕೆ ನೀಡುತ್ತಿರುವುದು ತಪ್ಪು. ಅವರ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅಗತ್ಯ ಇರದಿದ್ದರೆ ಮುಡಾ ಪ್ರಕರಣವನ್ನು ಸಿಬಿಐ ಅಥವಾ ಇಡಿ ತನಿಖೆಗೆ ಒಪ್ಪಿಸಿ ಸ್ಥಾನದಲ್ಲಿ ಮುಂದುವರಿಯಲಿ. ಸಿಎಂ ಆರೋಪಮುಕ್ತವಾಗಲು ಅವಕಾಶವಿದ್ದು, ಹಿರಿತನವನ್ನು ಪ್ರಜಾಪ್ರಭುತ್ವಕ್ಕೆ ಬೆಲೆ ಕೊಡುವುದರ ಮೂಲಕ ಪ್ರದರ್ಶಿಸಬೇಕೆಂದು ಒತ್ತಾಯಿಸಿದರು.
ಎಡಿಜಿಪಿ ಚಂದ್ರಶೇಖರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಗ್ರೇಡ್-2 ತಹಸೀಲ್ದಾರ್ ನೂರುಲ್ಲಹುದಾ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಜೆಡಿಎಸ್ ಪದಾಧಿಕಾರಿಗಳಾದ ಮಂಜುನಾಥ್, ದೇವೇಗೌಡ, ಗ್ರಾಪಂ ಮಾಜಿ ಅಧ್ಯಕ್ಷ ಎಂ.ಜೆ.ರಾಮಚಂದ್ರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net