

ರಾಯಚೂರು: ನಗರದಲ್ಲಿ ಮೂರು ದಿನಕ್ಕೊಮ್ಮೆ ಕುಡಿಯುವ ನೀರು ಸರಬರಾಜು ಮಾಡಲು ತೀರ್ಮಾನ ಕೈಗೊಂಡಿರುವ ನಗರಸಭೆ ತೀರ್ಮಾನ ಖಂಡಿಸಿ ಸ್ಥಳೀಯ ಜಿಲ್ಲಾಕಾರಿ ಕಚೇರಿ ಮುಂದೆ ಅಂಬೇಡ್ಕರ್ ಸೇನೆಯಿಂದ ಖಾಲಿ ಕೊಡ ಹಿಡಿದು ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ನಂತರ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿ, ನಗರದಲ್ಲಿ ಬೇಸಿಗೆ ಮುನ್ನವೇ ದಿನ ಬಿಟ್ಟು ದಿನ ನೀರು ಸರಬರಾಜು ಮಾಡಲಾಗುತ್ತಿದ್ದು, ಈಗ ಮೂರು ದಿನಕ್ಕೊಮ್ಮೆ ನೀರು ಹರಿಸುವ ನಿರ್ಧಾರ ಕೈಗೊಂಡಿರುವುದು ಸರಿಯಲ್ಲ ಎಂದರು.
ಜಿಲ್ಲೆಯ ಎಡಬಲದಲ್ಲಿ ಎರಡು ನದಿಗಳಿದ್ದರೂ ಜನರಿಗೆ ಸಮರ್ಪಕ ಕುಡಿಯುವ ನೀರು ಒದಗಿಸಲು ನಗರಸಭೆ ಅಕಾರಿಗಳು ವಿಲರಾಗಿದ್ದಾರೆ. ನಗರದ ಎಲ್ಲ ವಾರ್ಡ್‌ಗಳಿಗೆ ಪ್ರತಿನಿತ್ಯ ಕುಡಿಯುವ ನೀರು ಸರಬರಾಜು ಮಾಡಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಪ್ರತಿಭಟನೆಯಲ್ಲಿ ಸಂಘಟನೆ ಜಿಲ್ಲಾಧ್ಯಕ್ಷ ವಿಶ್ವನಾಥ ಪಟ್ಟಿ, ಪದಾಕಾರಿಗಳಾದ ಮಹೇಶ, ಕುಮಾರಸ್ವಾಮಿ, ಮಾರೆಪ್ಪ, ನರಸಪ್ಪ ಹಾಗೂ ಇನ್ನಿತರರಿದ್ದರು.