ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ವಹಿಸಿ

12-12-Shiva-3
ರಾಯಚೂರಿನ ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಕಾರಿ ಚಂದ್ರಶೇಖರ ನಾಯಕ ಅಧ್ಯಕ್ಷತೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಮಂಗಳವಾರ ಅಕಾರಿಗಳ ಸಭೆ ನಡೆಯಿತು. ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ, ಸಹಾಯಕ ಆಯುಕ್ತರಾದ ಅವಿನಾಶ ಸಿಂಧೆ, ಮಹೆಬೂಬಿ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಆರ್.ದೇವಿಕಾ ಇದ್ದರು.
Published on

ರಾಯಚೂರು: ಜಿಲ್ಲೆಯಲ್ಲಿ ಜನರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಬೇಕು. ಪ್ರತಿ ಗ್ರಾಮದಲ್ಲಿಯೂ ಜನರಿಗೆ ಸಮರ್ಪಕ ನೀರು ಒದಗಿಸಬೇಕು. ಅಗತ್ಯವಿದ್ದಲ್ಲಿ ಕೊಳವೆಬಾವಿ, ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕು ಎಂದು ಜಿಲ್ಲಾಕಾರಿ ಚಂದ್ರಶೇಖರ ನಾಯಕ ತಿಳಿಸಿದರು.
ಸ್ಥಳೀಯ ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಕುಡಿಯುವ ನೀರಿನ ಸಮಸ್ಯೆ ಕುರಿತು ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ನೀರಿನ ಸಮಸ್ಯೆಯಿರುವ ಹಳ್ಳಿಗಳಲ್ಲಿ ಖಾಸಗಿ ಕೊಳವೆಬಾವಿ ಗುರುತಿಸಿ ನೀರು ಸರಬರಾಜು ಮಾಡಲು ಕ್ರಮಕೈಗೊಳ್ಳಬೇಕು ಎಂದರು.
ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಅಗತ್ಯವಿದ್ದಲ್ಲಿ ಟೆಂಡರ್ ಕರೆಯಬೇಕು. ಸ್ಥಳೀಯ ಟ್ಯಾಂಕರ್‌ಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ನೀರಿನ ಮೂಲ ಗ್ರಾಮಕ್ಕೆ ಹತ್ತಿರವಿರುವಂತೆ ಗಮನ ಹರಿಸಬೇಕು. ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಿ ಪಟ್ಟಿ ತಯಾರಿಸಬೇಕು.
ಬಾಕಿ ಇರುವ ಜಲಜೀವನ್ ಮಿಷನ್ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು. ಜಲಧಾರೆ ಯೋಜನೆಯಡಿ ಮನೆ ಮನೆಗೆ ನಳದ ಸಂಪರ್ಕ ನೀಡಬೇಕು. ಎಲ್ಲ ಅಕಾರಿಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಚಂದ್ರಶೇಖರ ನಾಯಕ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ, ಸಹಾಯಕ ಆಯುಕ್ತರಾದ ಅವಿನಾಶ ಸಿಂಧೆ, ಮಹೆಬೂಬಿ, ತಹಸೀಲ್ದಾರ್‌ಗಳಾದ ಸುರೇಶ ವರ್ಮಾ, ಸುಧಾ ಅರಮನಿ, ಅರುಣ ದೇಸಾಯಿ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಆರ್.ದೇವಿಕಾ ಹಾಗೂ ತಾ.ಪಂ. ಇಒಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net