

ಹುಬ್ಬಳ್ಳಿ : ಬಿಜೆಪಿ ಸದಸ್ಯತ್ವ ಅಭಿಯಾನವನ್ನು ಕಾರ್ಯಕರ್ತರು ಗಂಭೀರವಾಗಿ ಪರಿಗಣಿಸುವಂತೆ ಶಾಸಕ ಮಹೇಶ ಟೆಂಗಿನಕಾಯಿ ಸೂಚಿಸಿದರು.
ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಪಕ್ಷದ ಸದಸ್ಯತ್ವ ಅಭಿಯಾನದ ಸಭೆಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರ ವ್ಯಾಪ್ತಿಯ ಎಲ್ಲ 25 ವಾರ್ಡ್ಗಳಲ್ಲಿ ಅಭಿಯಾನ ಯಶಸ್ವಿಗೊಳಿಸುವಂತೆ ತಿಳಿಸಿದರು.
ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ವಿಧಾನ ಪರಿಷತ್ ಸದಸ್ಯ ಹಾಗೂ ಅಭಿಯಾನದ ಉಸ್ತುವಾರಿ ಪ್ರಲ್ಹಾದ ಪೂಜಾರಿ, ಮಹಾಪೌರರಾದ ರಾಮಣ್ಣ ಬಡಿಗೇರ, ಉಪ ಮಹಾಪೌರರಾದ ದುರ್ಗಮ್ಮ ಬಿಜವಾಡ, ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ, ಪ್ರಧಾನ ಕಾರ್ಯದರ್ಶಿ ದತ್ತಮೂರ್ತಿ ಕುಲಕರ್ಣಿ, ಪಾಲಿಕೆ ಸದಸ್ಯರಾದ ಶಿವು ಮೆಣಸಿನಕಾಯಿ, ವೀರಣ್ಣ ಸವಡಿ ಹಾಗೂ ಇತರರು ಉಪಸ್ಥಿತರಿದ್ದರು.