ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮ ವಹಿಸಿ: ಡಿಜಿಪಿ ಡಾ.ಅಲೋಕ್ ಮೋಹನ್ ಸೂಚನೆ

dgp meeting
Published on

ಮೈಸೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ, ಐಜಿಪಿ) ಡಾ.ಅಲೋಕ್ ಮೋಹನ್ ಅವರು ನಗರದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು.


ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಶನಿವಾರ ದಕ್ಷಿಣ ವಲಯ ಮತ್ತು ಮೈಸೂರು ನಗರ ಪೊಲೀಸ್ ಘಟಕಗಳ ಪರಾಮರ್ಶನಾ ಸಭೆ ನಡೆಸಿದರು. ಚುನಾವಣಾ ಸಂದರ್ಭದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು. ಕಾನೂನು-ಸುವ್ಯವಸ್ಥೆ ಕಾಪಾಡಲು ಅಗತ್ಯ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಎಸ್‌ಪಿಗಳಿಗೆ ನಿರ್ದೇಶನ ನೀಡಿದರು.


ಮೈಸೂರು ನಗರ ಸೇರಿದಂತೆ ದಕ್ಷಿಣ ವಲಯ ವಾಪ್ತಿಯ ಜಿಲ್ಲೆಗಳಲ್ಲಿ ಕಾನೂನು ಸುವ್ಯವಸ್ಥೆ ಸಂಬಂಧ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿ, ಕೆಲ ಸೂಚನೆಗಳನ್ನು ನೀಡಿದರು.


ದಕ್ಷಿಣ ವಲಯ ಐಜಿಪಿ ಅಮಿತ್ ಸಿಂಗ್, ಮೈಸೂರು ನಗರ ಪೊಲೀಸ್ ಆಯುಕ್ತ ಬಿ.ರಮೇಶ್, ಡಿಸಿಪಿಗಳಾದ ಎಂ.ಮುತ್ತುರಾಜ್ (ಕಾನೂನು ಮತ್ತು ಸುವ್ಯವಸ್ಥೆ) ಮತ್ತು ಎಸ್.ಜಾಹ್ನವಿ (ಅಪರಾಧ ಮತ್ತು ಸಂಚಾರ), ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಎಎಸ್ಪಿ ನಂದಿನಿ ಸೇರಿದಂತೆ ಬೇರೆ ಜಿಲ್ಲೆಗಳ ಎಸ್ಪಿಗಳು, ಎಎಸ್ಪಿಗಳು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net