ಪ್ರವಾಹ ಪರಿಸ್ಥಿತಿಗೆ ಅಗತ್ಯಕ್ರಮ ತೆಗೆದುಕೊಳ್ಳಿ

Take necessary measures for flood situation
ಅಫಜಲ್​ಪುರ ತಾಲೂಕಿನ ಸೊನ್ನ ಬ್ಯಾರೇಜ್​ಗೆ ವಿಜಯಪುರ ಜಿಲ್ಲಾಧಿಕಾರಿ ಟಿ. ಭೂಬಾಲನ್​ ಹಾಗೂ ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ ಭೇಟಿ ನೀಡಿ ಪರಿಶೀಲಿಸಿದರು. ಜಿಪಂ ಸಿಇಒ ಬನ್ವರ್​ಸಿಂಗ್​ ಮೀನಾ, ಆಲಮೇಲ ತಹಸೀಲ್ದಾರ್​ ಸುರೇಶ ಚಾವಲರ ಮತ್ತಿತರರಿದ್ದಾರೆ.
Published on

ವಿಜಯಪುರ: ಮಹಾರಾಷ್ಟ್ರದಿಂದ ಭೀಮಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವ ಹಿನ್ನೆಲೆ ಮಂಗಳವಾರ ಜಿಲ್ಲಾಧಿಕಾರಿ ಟಿ. ಭೂಬಾಲನ್​ ಹಾಗೂ ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ ಅವರು ಭೀಮಾ ನದಿಗೆ ನಿರ್ಮಿಸಲಾದ ಸೊನ್ನ ಬ್ಯಾರೇಜ್​ಗೆ ಭೇಟಿ ನೀಡಿ ಪರಿಶೀಲಿಸಿದರು.

ಮಹಾರಾಷ್ಟ್ರದ ಉಜನಿ ಹಾಗೂ ವೀರ ಜಲಾಶಯದಿಂದ ನೀರು ಹರಿಬಿಟ್ಟಿರುವ ಹಿನ್ನೆಲೆಯಲ್ಲಿ ಭೀಮಾ ನದಿ ಪಾತ್ರದ ಪ್ರವಾಹ ಪರಿಸ್ಥಿತಿ ಬಗ್ಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಭೇಟಿ ನೀಡಿದ ಅವರು, ಈಗಾಗಲೇ ಮಹಾರಾಷ್ಟ್ರದಲ್ಲಿ ಅಲ್ಪ ಪ್ರಮಾಣದಲ್ಲಿ ಮಳೆ ನಿಂತಿದ್ದು ಉಜನಿ ಹಾಗೂ ವೀರ ಜಲಾಶಯದಿಂದ ನೀರು ಹರಿಸಲಾಗುತ್ತಿರುವುದರಿಂದ ಭೀಮಾ ನದಿ ಪಾತ್ರದ ಜನರು ಮುನ್ನೆಚ್ಚರಿಕೆ ವಹಿಸಬೇಕು ಮತ್ತು ಸಂಬಂಧಿಸಿದ ಅಧಿಕಾರಿಗಳು ನೀಡುವ ಮುನ್ನೆಚ್ಚರಿಕೆ, ಸೂಚನೆಗಳನ್ನು ಪಾಲಿಸಬೇಕು ಎಂದರು.

ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು. ನದಿ ಪಾತ್ರಕ್ಕೆ ಬಟ್ಟೆ ತೊಳೆಯಲು, ದನ& ಕರುಗಳಿಗೆ ನದಿ ಹತ್ತಿರಕ್ಕೆ ಹೋಗದಂತೆ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.

ಬ್ಯಾರೇಜ್​ನ ಎಲ್ಲ ಕ್ರಸ್ಟ್​ಗೇಟ್​ ಪರಿಶೀಲಿಸಿದ ಅವರು, ಭೀಮಾ ನದಿ ತೀರದಲ್ಲಿ ಪ್ರವಾಹಕ್ಕೊಳಗಾಗುವ ಗ್ರಾಮಗಳ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದು ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚಿಸಿದರು.

ಕಲಬುರಗಿ ಜಿಪಂ ಸಿಇಒ ಬನ್ವರ್​ಸಿಂಗ್​ ಮೀನಾ, ಆಲಮೇಲ ತಹಸೀಲ್ದಾರ್​ ಸುರೇಶ ಚಾವಲರ, ಅಫಜಲಪುರ ತಹಸೀಲ್ದಾರ್​ ಸಂಜೀವಕುಮಾರ ದಾಸರ, ಸಂತೋಷ ಸಜ್ಜನ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net