ಡೆಂಘೆ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಿ

18 ckm 7
ಚಿಕ್ಕಮಗಳೂರಿನಲ್ಲಿ ಡೆಂಘೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಸಕ ಎಚ್.ಡಿ.ತಮ್ಮಯ್ಯ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ಡಿಎಚ್‌ಒ ಡಾ.ಅಶ್ವಥ್ ಬಾಬು, ಜಿಲ್ಲಾ ಸರ್ಜನ್ ಮೋಹನ್ ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ.ಸೀಮಾ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಲಾರ್ವಾಗಳ ಸಮೀಕ್ಷೆ ನಡೆಸಿ ಸ್ವಚ್ಛತೆ ಕಾಪಾಡಬೇಕು. ಜೊತೆಗೆ ಇನ್ನಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಮನೆಗಳ ಸುತ್ತ ನೀರು ನಿಲ್ಲದಂತೆ ಹಾಗೂ ಅನುಪಯುಕ್ತ ವಸ್ತುಗಳನ್ನು ತೆರವುಗೊಳಿಸಿ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡುವಂತೆ ಶಾಸಕ ಎಚ್.ಡಿ.ತಮ್ಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಡೆಂಘೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿ ಬಳಿಕ ವೈದ್ಯಾಧಿಕಾರಿಗಳು ಹಾಗೂ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗುವಂತೆ ಎಲ್ಲ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿಸ ಶಾಸಕ ಎಚ್.ಡಿ.ತಮ್ಮಯ್ಯ, ಕಳೆದ ಕೆಲವು ದಿನಗಳಿಂದ ಡೆಂಘೆ ಜ್ವರದ ಪ್ರಕರಣಗಳು ಇಳಿಮುಖಗೊಂಡಿವೆ. ಹೀಗಾಗಿ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ಆದರೆ ಪ್ರತಿಯೊಬ್ಬರೂ ಮುನ್ನೆಚ್ಚರಿಕೆ ವಹಿಸಬೇಕು ಎಂದು ಹೇಳಿದರು.
ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ ಗ್ರಾಮೀಣ ಭಾಗದಲ್ಲಿ ಮನೆ ಮನೆಗೆ ಭೇಟಿ ನೀಡಿ ಮುಂಜಾಗ್ರತೆ ವಹಿಸಲು ಜನರಲ್ಲಿ ಅರಿವು ಮೂಡಿಸುತ್ತಿದ್ದಾರೆ. ನಗರಸಭೆ ವತಿಯಿಂದ ನಗರ ವ್ಯಾಪ್ತಿಯಲ್ಲಿ ನಾಲ್ಕು ಯಂತ್ರಗಳನ್ನು ಬಳಸಿ ಫಾಗಿಂಗ್ ಮಾಡಲಾಗುತ್ತಿದೆ. ಮತ್ತೆರಡು ಫಾಗಿಂಗ್ ಯಂತ್ರಗಳನ್ನು ತರಿಸಿಕೊಳ್ಳಲು ಸೂಚನೆ ನೀಡಿz್ದೆÃನೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಆಸ್ಪತ್ರೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಔಷಧ, ಮಾತ್ರೆಗಳು, ವೈದ್ಯರ ಲಭ್ಯತೆ ಇದೆ. ಹಾಸಿಗೆಗಳಿಗೆ ಒಂದಷ್ಟು ಬೇಡಿಕೆ ಹೆಚ್ಚಿದೆ. ಹೆಚ್ಚುವರಿ ಹಾಸಿಗೆಗಳ ವ್ಯವಸ್ಥೆ ಮಾಡಿಕೊಳ್ಳಲು ಜಿಲ್ಲಾ ಸರ್ಜನ್ ಅವರಿಗೆ ತಿಳಿಸಿz್ದÉÃವೆ. ಜ್ವರದ ಪ್ರಕರಣಗಳು ಹೆಚ್ಚಾಗಿ ವರದಿಯಾದಲ್ಲಿ ಬೇಲೂರು ರಸ್ತೆ ಸಮೀಪದ ಲೋಕೋಪಯೋಗಿ ಇಲಾಖೆ ಹಳೇ ಕಟ್ಟಡವನ್ನು ತಾತ್ಕಾಲಿಕವಾಗಿ ಬಳಸಿಕೊಳ್ಳಲು ಸಲಹೆ ನೀಡಿz್ದÉÃವೆ ಎಂದು ತಿಳಿಸಿದರು.
ಡೆಂಘೆ ಪ್ರಕರಣಗಳು ಉಲ್ಬಣಗೊಂಡಿದ್ದರೂ ಉಸ್ತುವಾರಿ ಸಚಿವರು, ಚುನಾಯಿತ ಪ್ರತಿನಿಧಿಗಳು ಗಂಭೀರವಾಗಿ ಪರಿಗಣಿಸಿಲ್ಲ ಎನ್ನುವ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಶಾಸಕರು, ಚುನಾವಣಾ ನೀತಿಸಂಹಿತೆ ಇದ್ದಾಗಲೂ ನಾವು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿz್ದÉÃವೆ. ವೈದ್ಯಾಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡಿz್ದÉÃವೆ. ಆದರೆ ನೀತಿ ಸಂಹಿತೆ ಸಂದರ್ಭದಲ್ಲಿ ವೈದ್ಯರು, ಇಲಾಖೆ ಅಧಿಕಾರಿಗಳ ಜೊತೆ ಸಭೆ ಮಾಡಲು ಅವಕಾಶ ಇರುವುದಿಲ್ಲ. ಇದು ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರುವ ವಿಚಾರ ಎಂದು ಉತ್ತರಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವತ್ಥ ಬಾಬು ಮಾತನಾಡಿ, ಈ ವರ್ಷ ಜನವರಿಯಿಂದ ಈ ವರೆಗೆ ಜಿಲ್ಲೆಯಲ್ಲಿ ಒಟ್ಟು ೩೮೫ ಡೆಂಘೆ ಪ್ರಕರಣಗಳು ವರದಿಯಾಗಿವೆ. ಜೂನ್, ಜುಲೈನಲ್ಲೇ ೧೭೦ ಮಂದಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದರು. ಇದೀಗ ಇಡೀ ಜಿಲ್ಲೆಯಲ್ಲಿ ೨೫ ಸಕ್ರೀಯ ಪ್ರಕರಣಗಳಿವೆ ಎಂದು ಮಾಹಿತಿ ನೀಡಿದರು.
ಎಲ್ಲಾ ಜ್ವರದ ಪ್ರಕರಣಗಳು ಡೆಂಘೆ ಪ್ರಕರಣಗಳಾಗಿರುವುದಿಲ್ಲ. ಕಾರ್ಡ್ ಪರೀಕ್ಷೆ ನಂತರ ಎಲಿಸಾ ಪರೀಕ್ಷೆಯಲ್ಲೂ ದೃಢಪಟ್ಟರೆ ಮಾತ್ರ ಅದನ್ನು ಡೆಂಘೆ ಎಂದು ಪರಿಗಣಿಸಲಾಗುತ್ತದೆ. ಉಳಿದವು ಸಾಮಾನ್ಯ ಜ್ವರದ ಪ್ರಕರಣಗಳಾಗಿರುತ್ತವೆ. ಈ ಹಿನ್ನೆಲೆಯಲ್ಲಿ ಯಾರೂ ಆತಂಕ ಪಡಬಾರದು ಎಂದು ದೈರ್ಯ ತುಂಬಿದರು.
ತುAಬಾ ಬಿಸಿಲು ನಂತರ ಏಕಾ ಏಕಿ ಜೋರಾಗಿ ಮಳೆ ಸುರಿದ ಪರಿಣಾಮ ವಾತಾವರಣದಲ್ಲಾದ ವ್ಯತ್ಯಾಸದಿಂದಾಗಿ ಜ್ವರದ ಪ್ರಕರಣಗಳು ಹೆಚ್ಚುತ್ತಿವೆ. ನಗರ ಪ್ರದೇಶದ ಹೊರವಲಯದಲ್ಲಿ ಕೈಗಾರಿಕಾ ಪ್ರದೇಶಗಳು, ಜನವಸತಿ ಸೇರಿ ಸೆಮಿ ಅರ್ಬನ್ ಪ್ರದೇಶಗಳು ಹೆಚ್ಚಿರುವುದರಿಂದ ಅಲ್ಲಲ್ಲಿ ನೀರು ಸಂಗ್ರಹ ಹೆಚ್ಚಾಗುತ್ತಿದೆ. ಈ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.
ಇದೀಗ ಡೆಂಘೆ ಪ್ರಕರಣಗಳು ನಿಯಂತ್ರಣಕ್ಕೆ ಬರುತ್ತಿದೆ. ೩೮೫ ಪ್ರಕರಣಗಳು ಜಿಲ್ಲೆಯಲ್ಲಿ ಪತ್ತೆಯಾದರೂ ಯಾರೊಬ್ಬರೂ ಜೀವ ಕಳೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.
ಜಿಲ್ಲಾ ಸರ್ಜನ್ ಡಾ.ಮೋಹನ್ ಕುಮಾರ್ ಮಾತನಾಡಿ, ಜಿಲ್ಲಾ ಆಸ್ಪತ್ರೆಗೆ ಪ್ರತಿದಿನ ಹತ್ತಾರು ಜ್ವರದ ಪ್ರಕರಣಗಳು ಬರುತ್ತಿವೆ. ಇದರಲ್ಲಿ ಡೆಂಘೆಗಿAತಲೂ ವಿಷಮ ಶೀತ ಜ್ವರದ ಪ್ರಕರಣಗಳು ಹೆಚ್ಚಿವೆ. ವಾರದ ಹಿಂದೆ ಆಸ್ಪತ್ರೆಯಲ್ಲಿ ಪ್ರತಿದಿನ ಕನಿಷ್ಠ ೧೦ ಮಂದಿಗೆ ಪ್ಲೇಟ್‌ಲೆಟ್ ಹಾಕಬೇಕಿತ್ತು. ಹಾಲಿ ದಿನಕ್ಕೆ ಹೆಚ್ಚೆಂದರೆ ಒಬ್ಬರಿಗೆ ಮಾತ್ರ ಪ್ಲೇಟ್‌ಲೆಟ್ ಅಗತ್ಯಬೀಳುತ್ತಿದೆ. ಈಗ ಒಟ್ಟು ೧೦ ಡೆಂಘೆ ಪೀಡಿತರು ಮಾತ್ರ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಸೀಮಾ, ವೈದ್ಯರಾದ ಡಾ. ಭರತ್, ಡಾ. ಚಂದ್ರಶೇಖರ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net