

ಹೊನ್ನಾವರ: ಯುವ ಕ್ರೀಡಾಪಟುಗಳು ಉತ್ಸಾಹದಿಂದ ಕ್ರೀಡೆಯಲ್ಲಿ ಭಾಗವಹಿಸಿ ಜಿಲ್ಲಾ, ರಾಜ್ಯಮಟ್ಟದಲ್ಲಿ ತಾಲೂಕಿಗೆ ಕೀರ್ತಿ ತರಬೇಕು ಎಂದು ತಾಪಂ ಇಒ ಸುರೇಶ ನಾಯ್ಕ ಹೇಳಿದರು.
ಪಟ್ಟಣದ ಎಸ್ಡಿಎಂ ಪದವಿ ಕಾಲೇಜು ಕ್ರೀಡಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
ಹೊನ್ನಾವರ ಎನ್ನುವುದು ಕಲೆ, ಕ್ರೀಡೆ, ಸಾಂಸ್ಕೃತಿಕ ವಲಯದಲ್ಲಿ ರಾಜ್ಯಕ್ಕೆ ಮಾದರಿಯಾಗಿದೆ. ಕ್ರೀಡಾ ಕ್ಷೇತ್ರದಲ್ಲಿ ಹಲವು ಸಾಧಕರಿದ್ದಾರೆ. ಅವರಿಂದ ಪ್ರೇರಣೆ ಹೊಂದಿ ಸಾಧನೆ ಮಾಡಬೇಕು. ಸರ್ಕಾರವು ಕ್ರೀಡೆಗೆ, ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಸ್ಥಳೀಯವಾಗಿರುವ ಕ್ರೀಡೆಯನ್ನು ಉಳಿಸಲು ನಾವೆಲ್ಲರೂ ಪ್ರಯತ್ನಿಸೋಣ ಎಂದರು.
ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷೆ ಸಾಧನಾ ಬರ್ಗಿ, ತಾಲೂಕು ಅಧ್ಯಕ್ಷ ಬಾಬು ನಾಯ್ಕ, ಯುವಜನ ಸೇವಾ ಕ್ರೀಡಾಧಿಕಾರಿ ಸುಧೀಶ್ ನಾಯ್ಕ ಉಪಸ್ಥಿತರಿದ್ದರು.