ಆರು ತಿಂಗಳಿಗೊಮ್ಮೆ ಮಾತ್ರೆ ಸೇವಿಸಿ

10 LNG 03
ಲಿಂಗಸುಗೂರು ಸರ್ಕಾರಿ ಬಾಲಕಿಯರ ಶಾಲೆಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಜಂತುಹುಳು ನಿವಾರಣೆ ಕಾರ್ಯಕ್ರಮದಲ್ಲಿ ಡಾ.ಅಮರೇಶ ಪಾಟೀಲ್ ಮಾತನಾಡಿದರು. ಮುಖ್ಯಶಿಕ್ಷಕ ಚಂದ್ರಶೇಖರ, ಆರೋಗ್ಯ ಶಿಕ್ಷಣಾಧಿಕಾರಿ ಪ್ರಾಣೇಶ ಜೋಷಿ, ಆಪ್ತ ಸಮಾಲೋಚಕ ಹುಚ್ಚಪ್ಪ, ಆರೋಗ್ಯ ಸುರಕ್ಷತಾ ಅಧಿಕಾರಿ ಸಿದ್ದಮ್ಮ, ಶಿಕ್ಷಕರಾದ ಮಹಾಂತಗೌಡ, ಮುದಕನಗೌಡ, ಶರಣಮ್ಮ, ಶ್ರೀದೇವಿ, ಕೋಮಲಾ, ಆಶಾ ಕಾರ್ಯಕರ್ತೆ ಲಕ್ಷ್ಮೀ ಇತರರಿದ್ದರು.
Published on

ಲಿಂಗಸುಗೂರು: ಪಟ್ಟಣದ ಸರ್ಕಾರಿ ಬಾಲಕಿಯರ ಶಾಲೆಯಲ್ಲಿ ತಾಲೂಕು ಆರೋಗ್ಯ ಇಲಾಖೆಯಿಂದ ರಾಷ್ಟ್ರೀಯ ಜಂತು ಹುಳು ನಿವಾರಣೆ ಜಾಗೃತಿ ಕಾರ್ಯಕ್ರಮ ಸೋಮವಾರ ನಡೆಯಿತು.

ಟಿಎಚ್‌ಒ ಡಾ.ಅಮರೇಶ ಪಾಟೀಲ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗ ಸೂಚಿಯಂತೆ ಆರೋಗ್ಯ ಇಲಾಖೆಯಿಂದ ಪ್ರತಿ ಆರು ತಿಂಗಳಿಗೊಮ್ಮೆ 2 ರಿಂದ 19 ವರ್ಷದೊಳಗಿನ ಮಕ್ಕಳಿಗೆ ಅಲ್ಬೆಂಡಾಜೋಲ್-400 ಎಂಜಿ ಮಾತ್ರೆಗಳನ್ನು ನೀಡಲಾಗುವುದು.

ಈ ಮಾತ್ರೆಗಳ ಸೇವನೆಯಿಂದ ರಕ್ತ ಹೀನತೆ ನಿವಾರಿಸಿ ಆರೋಗ್ಯ ವೃದ್ಧಿಸಲಿದೆ. ಈ ವೇಳೆ ಮಕ್ಕಳಿಗೆ ವೈಯಕ್ತಿಕ ಸ್ವಚ್ಛತೆ, ಸರಿಯಾಗಿ ಕೈ ತೊಳೆಯುವುದು, ಪೌಷ್ಟಿಕ ಆಹಾರ ಸೇವನೆ, ಕಡ್ಡಾಯವಾಗಿ ಶೌಚಗೃಹ ಬಳಕೆಯ ಮಹತ್ವ ಕುರಿತು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net