ಡೆಂಗ್ಯು ತಡೆಗೆ ಮುಂಜಾಗೃತೆ ಕ್ರಮ ಕೈಗೊಳ್ಳಿ; ಜಿಲ್ಲಾಧಿಕಾರಿ ಟಿ. ಭೂಬಾಲನ್‌ಗೆ ಕೆಆರ್‌ಎಸ್ ಮನವಿ

KRS MANAVI DENGE
ವಿಜಯಪುರ ಜಿಲ್ಲಾಧಿಕಾರಿ ಟಿ. ಭೂಬಾಲನ್‌ಗೆ ಕೆಆರ್‌ಎಸ್ ಪಕ್ಷದ ಪದಾಧಿಕಾರಿಗಳು ಮನವಿ ಸಲ್ಲಿಸಿದರು. ಅಬ್ದುಲ್‌ಹಮೀದ್ ಎಸ್. ಇನಾಮದಾರ, ವಿಕ್ರಮ ವಾಘಮೋರೆ, ದುರ್ಗಪ್ಪ ಬೂದಿಹಾಳ ಇದ್ದಾರೆ.
Published on

ವಿಜಯಪುರ: ಹೆಚ್ಚುತ್ತಿರುವ ಡೆಂಗ್ಯು ಹಾವಳಿ ತಡೆಗೆ ಆಗ್ರಹಿಸಿ ಕೆಆರ್‌ಎಸ್ ಪಕ್ಷದ ಪದಾಧಿಕಾರಿಗಳು ಗುರುವಾರ ಜಿಲ್ಲಾಧಿಕಾರಿ ಟಿ. ಭೂಬಾಲನ್‌ಗೆ ಮನವಿ ಸಲ್ಲಿಸಿದರು.

ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ ಮಾತನಾಡಿ, ವಿಜಯಪುರ ನಗರ ಮತ್ತು ಜಿಲ್ಲೆಯಲ್ಲಿ ಸೊಳ್ಳೆಗಳ ಅಬ್ಬರ ಹೆಚ್ಚಾಗಿದೆ. ಮಳೆಗಾಲವಾದ್ದರಿಂದ ಸೊಳ್ಳೆಗಳ ಉತ್ಪತ್ತಿ ಸಹಜವಾಗಿಯೇ ಹೆಚ್ಚಾಗಿದೆ. ಹೀಗಾಗಿ ಸೊಳ್ಳೆಗಳ ನಿಯಂತ್ರಣಕ್ಕಾಗಿ ಫಾಗಿಂಗ್ ಮಾಡಬೇಕು. ಶುದ್ಧ ಕುಡಿಯುವ ನೀರಿಗೆ ರಾಸಾಯನಿಕ ಮಿಶ್ರಣಗೊಳ್ಳದಂತೆ ಜಾಗೃತೆ ವಹಿಸಬೇಕು ಎಂದರು.

ಈಗಾಗಲೇ ಡೆಂಗ್ಯು ಉಲ್ಭಣಗೊಂಡಿದೆ. ಸಾವು-ನೋವು ಆಗದಂತೆ ಸಕಾಲಕ್ಕೆ ಸಮರ್ಪಕವಾಗಿ ಚಿಕಿತ್ಸೆ ಒದಗಿಸಬೇಕು. ನೀರಿನ ಗುಣಮಟ್ಟ ಪರಿಶೀಲಿಸಿ ಸಾರ್ವಜನಿಕರಿಗೆ ಅಗತ್ಯವಾದ ಸೂಚನೆ ಮತ್ತು ಆರೋಗ್ಯಕ್ಕೆ ಬೇಕಾಗುವ ತುರ್ತು ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾಡಳಿತ ತುರ್ತು ಸಭೆ ಕರೆದು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ನಗರ ಅಧ್ಯಕ್ಷ ಅಬ್ದುಲ್‌ಹಮೀದ್ ಎಸ್. ಇನಾಮದಾರ, ವಿಕ್ರಮ ವಾಘಮೋರೆ, ದುರ್ಗಪ್ಪ ಬೂದಿಹಾಳ, ಶಾಂತುಗೌಡ ಬೇಡೆವಾಡ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net