

ಅರಕಲಗೂಡು; ವಿದ್ಯಾರ್ಥಿ ನಿಲಯಗಳು ಹಾಗೂ ವಸತಿ ಶಾಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳ ಮೂಲಕ ಡೆಂೆ ನಿಯಂತ್ರಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೀಟಶಾಸ್ತ್ರಜ್ಞ ರಾಜೇಶ್ ಕುಲಕರ್ಣಿ ಹೇಳಿದರು.
ಪಟ್ಟಣದ ತಾಲೂಕು ಆರೋಗ್ಯಾಧಿಕಾರಿ ಕಚೇರಿಯಲ್ಲಿ ತಾಲೂಕು ಆರೋಗ್ಯ ಇಲಾಖೆ ಡೆಂೆ ನಿಯಂತ್ರಣ ಕುರಿತು ವಸತಿ ಶಾಲೆಗಳು ಮತ್ತು ವಿದ್ಯಾರ್ಥಿ ನಿಲಯಗಳ ಮೇಲ್ವಿಚಾರಕರು ಮತ್ತು ಸಿಬ್ಬಂದಿಗೆ ಬುಧವಾರ ಹಮ್ಮಿಕೊಂಡಿದ್ದ ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿದರು. ಡೆಂೆ ಸೊಳ್ಳೆಗಳಿಂದ ಹರಡುವ ಕಾಯಿಲೆಯಾಗಿದ್ದು, ಸೊಳ್ಳೆಗಳನ್ನು ನಿಯಂತ್ರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಮಂಜುಳಾ ಮಾತನಾಡಿ, ಹೃದಯಾಘಾತ ಪ್ರಕರಣಗಳಿಗೆ ಬದಲಾಗುತ್ತಿರುವ ಜೀವನ ಶೈಲಿ, ಆಹಾರ ಕ್ರಮಗಳು ಕಾರಣವಾಗಿದೆ ಎಂದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಪುಷ್ಪಲತಾ ಮಾತನಾಡಿ, ವಸತಿ ಶಾಲೆಗಳಲ್ಲಿ ಶಿಕ್ಷಣದ ಜತೆಗೆ ಆರೋಗ್ಯ, ಹದಿಹರೆಯದ ಮಕ್ಕಳ ಸಮಸ್ಯೆಗಳ ಕುರಿತು ಗಮನ ಹರಿಸಬೇಕು. ಮಕ್ಕಳಿಗೆ ನೈತಿಕ ಶಿಕ್ಷಣ ಬೋಧಿಸುವಂತೆ ಸಲಹೆ ನೀಡಿದರು.
ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ನಾಗಪ್ಪ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಮಾಹಿತಿ ನೀಡಿದರು.
ಜಿಲ್ಲಾ ಆರೋಗ್ಯ ನಿರೀಕ್ಷಣಾಧಿಕಾರಿ ರಾಮಪ್ಪ, ಆರೋಗ್ಯ ನಿರೀಕ್ಷಕ ವಿಷ್ಣುಪ್ರಕಾಶ್, ಆಪ್ತ ಸಮಾಲೋಚಕ ಪರಶುರಾಮ್ ಶಿರೂರ್, ಇಲಾಖೆ ಅಧಿಕಾರಿಗಳಾದ ಮಂಜುಳಾ, ಪರಮೇಶ್, ಮೋಹನ್, ಜಯರಾಮ್, ಕವಿತಾ, ವಿಮಲಾ ಇತರರಿದ್ದರು.