ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಕ್ರಮವಹಿಸಿ

Take steps to improve educational standards
ವಿಜಯಪುರದ ಜಿ.ಪಂ. ಸಭಾಂಗಣದಲ್ಲಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್​ಕುಮಾರ ೂಷ್​ ಮಾತನಾಡಿದರು. ಜಿಪಂ ಸಿಇಒ ರಿಷಿ ಆನಂದ ಇದ್ದಾರೆ.
Published on

ವಿಜಯಪುರ: ಭವಿಷ್ಯದಲ್ಲಿ ಮಕ್ಕಳ ದಾಖಲೆಗಳಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಲು ಪ್ರಾಥಮಿಕ ಹಂತದಲ್ಲಿಯೇ ಶಿಕ್ಷಣ ಇಲಾಖೆ ಹೊಂದಿರುವ ತಂತ್ರಾಂಶದಡಿ ಹೆಸರು ದಾಖಲಿಸುವ ಸಂದರ್ಭದಲ್ಲಿ ದಾಖಲಾಗುತ್ತಿರುವ ಮಕ್ಕಳ ಹೆಸರು&ಆಧಾರದೊಂದಿಗೆ ತಾಳೆಯಾಗಲು ಕ್ರಮ ವಹಿಸುವಂತೆ ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆ (ಇ&ಆಡಳಿತ) ಸರ್ಕಾರದ ಕಾರ್ಯದರ್ಶಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್​ಕುಮಾರ ೂಷ್​ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಪಂ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಿಕ್ಷಣ ಇಲಾಖೆ ತಂತ್ರಾಂಶದಡಿ ಈಗಾಗಲೇ ದಾಖಲಾಗಿರುವ ಮಕ್ಕಳ ಹೆಸರುಗಳು ಆಧಾರದೊಂದಿಗೆ ಸರಿಪಡಿಸಲು ಜಿಲ್ಲೆಯ ಎಲ್ಲ ಶಾಲೆಗಳಲ್ಲಿ ಅಭಿಯಾನ ಹಮ್ಮಿಕೊಳ್ಳುವ ಮೂಲಕ ದಾಖಲೆಗಳನ್ನು ಸರಿಪಡಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.

ಶಾಲಾ ಮೊದಲು ಮತ್ತು ಶಾಲಾ ನಂತರದಲ್ಲಿ ಹೆಚ್ಚುವರಿ ತರಗತಿಗಳನ್ನು ಹಮ್ಮಿಕೊಂಡು, ಮಕ್ಕಳ ಶಿಕ್ಷಣದಲ್ಲಿ ಸುಧಾರಣೆಗೆ ಕ್ರಮ ವಹಿಸಬೇಕು. ಈ ನಿಟ್ಟಿನಲ್ಲಿ ತಾಲೂಕಿನ ಬಿಇಒಗಳೊಂದಿಗೆ ಹಾಗೂ ಶಾಲೆ ಮುಖ್ಯೋಪಾಧ್ಯಾಯರೊಂದಿಗೆ ಸಮನ್ವಯತೆ ಸಾಧಿಸಿಕೊಂಡು ಸೂಕ್ತ ಕ್ರಿಯಾಯೋಜನೆ ರೂಪಿಸಿಕೊಂಡು ಮಕ್ಕಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಕ್ರಮ ವಹಿಸಬೇಕು. ಜಿಲ್ಲೆಯ ಎಸ್​ಎಸ್​ಎಲ್​ಸಿ ಫಲಿತಾಂಶ ಸುಧಾರಣೆಗೆ ಅಗತ್ಯ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ನಿಲಯಗಳ ಸಮರ್ಪಕ&ವ್ಯವಸ್ಥಿತ ನಿರ್ವಹಣೆಗಾಗಿ ಅವಶ್ಯಕವಿರುವ ಅಡುಗೆ ಸಹಾಯಕರು ಸೇರಿದಂತೆ ಸಿಬ್ಬಂದಿಗಳ ನೇಮಕಾತಿಗೆ ಸೂಕ್ತ ಪ್ರಸ್ತಾವನೆ ಸಿದ್ಧಪಡಿಸಿ ಸಲ್ಲಿಸುವಂತೆ ಹೇಳಿದರು.

ವಿವಿಧ ವಸತಿ ನಿಲಯಗಳ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ, ಕಾಲಕಾಲಕ್ಕೆ ವಸತಿ ನಿಲಯಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ವಸತಿ ನಿಲಯಗಳಲ್ಲಿ ಅನಧಿಕೃತ ವ್ಯಕ್ತಿಗಳು ವಾಸವಾಗದೆ ಇರುವ ಕುರಿತು ತೀವ್ರ ನಿಗಾವಹಿಸಿ, ಅಲ್ಲದೆ, ಮೂಲ ಸೌಲಭ್ಯಗಳಿಗೆ ಕೊರತೆಯಾಗದಂತೆ ನೋಡಿಕೊಳ್ಳಬೇಕು. ವಸತಿ ನಿಲಯಕ್ಕೆ ಪ್ರವೇಶ ಕಲ್ಪಿಸಲು ಈಗಾಗಲೇ ಇರುವ ಕಟ್ಟಡಗಳ ಕೊರತೆಯಾದಲ್ಲಿ ಹೆಚ್ಚುವರಿ ವಿದ್ಯಾರ್ಥಿಗಳಿಗೆ, ಬಾಡಿಗೆ ಕಟ್ಟಡ ಪಡೆದು ಮಕ್ಕಳಿಗೆ ಪ್ರವೇಶ ಒದಗಿಸಬೇಕು. ಅವಶ್ಯಕತೆ ಇರುವ ವಸತಿ ನಿಲಯ ಕಟ್ಟಡಗಳ ಕುರಿತು ಸೂಕ್ತ ಪ್ರಸ್ತಾವನೆ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಸೂಚಿಸಿದರು.

ಅರಣ್ಯ ಇಲಾಖೆಯಿಂದ ಜಿಲ್ಲೆಯಲ್ಲಿ ಹಸರಿಕರಣಕ್ಕೆ ಕ್ರಮವಹಿಸಬೇಕು. ಅತಿ ಹೆಚ್ಚು ಸಸಿಗಳನ್ನು ನೆಡುವ ಮೂಲಕ ಹಸರಿಕರಣಕ್ಕೆ ಮುಂದಾಗಬೇಕು. ಜಿಲ್ಲೆಯಲ್ಲಿ ಹಸರಿಕರಣಕ್ಕೆ ಒತ್ತು ನೀಡಿ, ಹವಾಮಾನಕ್ಕೆ ಅನುಗುಣವಾದ ಸಸಿಗಳನ್ನು ಬೆಳೆಸಬೇಕು. ಜಿಲ್ಲೆಯ ಕೈಗೊಂಡ ಕ್ರಮಗಳ ಕುರಿತು ಸೂಕ್ತ ಕಾರ್ಯಯೋಜನೆಯನ್ನು ಸಿದ್ಧಪಡಿಸಿಕೊಂಡು ವರದಿ ಸಲ್ಲಿಸುವಂತೆ ಅವರು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆ ಮತ್ತು ಕಲುಷಿತ ನೀರು ಪೂರೈಕೆಯಾಗದಂತೆ ಎಚ್ಚರಿಕೆ ವಹಿಸಬೇಕು. ಬಯೋಲಾಜಿಕಲ್​ ಮತ್ತು ಕೆಮಿಕಲ್​ ಪರೀೆಯನ್ನು ನಿಯಮಿತವಾಗಿ ಕೈಗೊಂಡು ಶುದ್ಧ ಕುಡಿಯುವ ನೀರು ಪೂರೈಸಲು ಕ್ರಮ ವಹಿಸಬೇಕು. ಶಾಲೆ, ಅಂಗನವಾಡಿ, ವಸತಿ ನಿಲಯ, ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ಅವಶ್ಯಕತೆ ಇರುವ ಕಡೆ ಪರಿಶೀಲನೆ ನಡೆಸಿ ನೀರು ಪೂರೈಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್​ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಮಾತನಾಡಿ, ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ನಿಯಂತ್ರಣ ಕುರಿತು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಪ್ರವಾಹ ನಿಯಂತ್ರಣ ಯೋಜನೆ ರೂಪಿಸುವ ಕುರಿತು ಈಗಾಗಲೇ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲೆಯ ಹರನಾಳ, ದಾಶ್ಯಾಳ ಸಾರವಾಡ, ಎನ್​ಎಚ್​ 218 ಹೊನಗನಹಳ್ಳಿ, ಉಕುಮನಾಳ, ಹಿಟ್ನಳ್ಳಿ ಡೋಣಿ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಜ್​ಗಳ ಪ್ರದೇಶಕ್ಕೆ ಭೇಟಿ ನೀಡಿ ತಾತ್ಕಾಲಿಕವಾಗಿ ಕೈಗೊಳ್ಳಬೇಕಾದ ಕಾಮಗಾರಿಗಳ ಕುರಿತು ಸೂಕ್ತ ಪರಿಶೀಲನೆ ನಡೆಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. ಜಿಪಂ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ, ಜಿಪಂ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ವಿಡಿಎ ಆಯುಕ್ತ ರಾಜಶೇಖರ ಡಂಬಳ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ರೂಪಾ ಎಲ್​., ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರಾಹುಲ ಭಾವಿದೊಡ್ಡಿ, ಸಂಪತಕುಮಾರ ಗುಣಾರಿ, ಜಿಲ್ಲಾ ಶಸ ಚಿಕಿತ್ಸಕ ಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಪ್ರವಾಸೋದ್ಯಮ ಮಲ್ಲಿಕಾರ್ಜುನ ಭಜಂತ್ರಿ, ಹೆಸ್ಕಾಂ ಅಧೀಕ್ಷಕ ಅಭಿಯಂತರ ಸಿದ್ದಪ್ಪ ಬಿಂಜಗೇರಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net