ರೈತನ ಆದಾಯ ಹೆಚ್ಚಿಸಲು ಕ್ರಮ ವಹಿಸಿ: ಸಿಇಒ ರಾಹುಲ್​ ಸೂಚನೆ

10manju3
Published on
ಬೆಳಗಾವಿ: ರಾಷ್ಟ್ರೀಯ ತೋಟಗಾರಿಕೆ ಮಿಷನ್​, ನರೇಗಾ ಯೋಜನೆಯಡಿ ಹೆಚ್ಚಿನ ರೈತರಿಗೆ ಸಹಾಯ ನೀಡಿ ರೈತರ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಪಂ ಸಿಇಒ ರಾಹುಲ ಶಿಂಧೆ ಸೂಚನೆ ನೀಡಿದರು.
ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ತೋಟಗಾರಿಕೆ ಇಲಾಖೆ ರಾಷ್ಟ್ರೀಯ ತೋಟಗಾರಿಕೆ ಮಿಷನ್​ ಯೋಜನೆ ಮತ್ತು ಕರ್ನಾಟಕ ರಾಜ್ಯ ತೋಟಗಾರಿಕೆ ಅಭಿವೃದ್ಧಿ ಏಜನ್ಸಿ ಯೋಜನೆಗಳ ಜಿಲ್ಲಾಮಟ್ಟದ ತಾಂತ್ರಿಕ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ತೋಟಗಾರಿಕೆ ಇಲಾಖೆಯ ಪ್ರತಿಯೊಂದು ಯೋಜನೆ ಸೌಲಭ್ಯ ರೈತರಿಗೆ ನೇರವಾಗಿ ತಲುಪಬೇಕು. ಮಧ್ಯವರ್ತಿಗಳ ಅವಕಾಶ ಕಲ್ಪಿಸಿಕೊಡಬೇಡಿ ಎಂದರು.
ರೈತರಿಗೆ ಯಾವುದೇ ಅಡೆತಡೆಯಿಲ್ಲದೇ ತೋಟಗಾರಿಕೆ ಚಟುವಟಿಕೆ ಕೈಗೊಳ್ಳಲು ಇಲಾಖೆ ವಿವಿಧ ಯೋಜನೆಗಳಡಿ ಸಹಾಯಧನ ನೀಡುವುದು. 2025&26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್​ ಯೋಜನೆಯಡಿ ಹೆಚ್ಚಿನ ಪ್ರಚಾರ ಕೈಗೊಂಡು ರೈತರಿಗೆ ಸದುಪಯೋಗವಾಗುವಂತೆ ಕಾರ್ಯಕ್ರಮ ರೂಪಿಸಬೇಕು. ಈ ವಿಷಯದಲ್ಲಿ ಯಾರೂ ರ್ನಿಲಕ್ಷ$್ಯ ಮಾಡುವಂತಿಲ್ಲ ಎಂದು ತಿಳಿಸಿದರು.
ರಾಜ್ಯ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಜಿಲ್ಲೆಯ ಎಲ್ಲ ತೋಟಗಾರಿಕೆ ೇತ್ರ ಮತ್ತು ನರ್ಸರಿಗಳಲ್ಲಿ ಗುಣಮಟ್ಟದ ತೋಟಗಾರಿಕೆ ಕಸಿ ಸಸಿ ತಯಾರಿಸುವುದು ಮತ್ತು ರೈತರಿಗೆ ತೋಟಗಾರಿಕೆ ಬೆಳೆಗಳ ಕುರಿತಾಗಿ ತಾಂತ್ರಿಕ ಮಾಹಿತಿ ನೀಡಬೇಕು. ಜತೆಗೆ ಬೆಳೆಗಳ ಇಳುವರಿ, ಗೊಬ್ಬರ ಬಳಕೆ ಕುರಿತು ಜಾಗೃತಿ ಮೂಡಿಸಬೇಕು ಎಂದರು. ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕ ಮಾಹಾಂತೇಶ ಮುರಗೋಡ, ಪಶುಪಾಲನೆ ಇಲಾಖೆ ಉಪ ನಿರ್ದೇಶಕ ರಾಜೀವ್​ ಕುಲೇರ್​, ರೇಷ್ಮೆ ಇಲಾಖೆ ಉಪ ನಿರ್ದೇಶಕ ಎಸ್​. ಮಹೇಶ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net