ತಾಳಗುಪ್ಪ - ಖಾನಾಪುರ ರಾಜ್ಯ ಹೆದ್ದಾರಿ ಗುಂಡಿಗಳ ರಹದಾರಿ

3 Aln 1,,
Published on

ಅಳ್ನಾವರ: ಸತತ ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮೂರು ಜಿಲ್ಲೆಗಳ ಗಡಿಭಾಗದಲ್ಲಿರುವ ಅಳ್ನಾವರದ ಮಧ್ಯದಲ್ಲಿ ಹಾದು ಹೋಗಿರುವ ತಾಳಗುಪ್ಪ - ಖಾನಾಪುರ ರಾಜ್ಯ ಹೆದ್ದಾರಿಯಲ್ಲಿ ಅಲ್ಲಲ್ಲಿ ದೊಡ್ಡ ದೊಡ್ಡ ಗುಂಡಿಗಳು ಬಿದ್ದು ವಾಹನ ಸವಾರರು ಪರದಾಡುವಂತಾಗಿದೆ.

ಎರಡು ವರ್ಷಗಳ ಹಿಂದೆ ಕಾಳಿ ನದಿಯಿಂದ ನೀರು ಸರಬರಾಜಿಗಾಗಿ ಪೈಪ್​ಲೈನ್ ಕಾಮಗಾರಿಯ ಸಂದರ್ಭದಲ್ಲಿ ರಸ್ತೆಗೆ ಅಡ್ಡಲಾಗಿ ತಗ್ಗು ತೆಗೆದು ನಂತರ ಮಣ್ಣಿನಿಂದ ಮುಚ್ಚಲಾಗಿತ್ತು. ಈ ಬಾರಿ ಸುರಿದ ಮಳೆಗೆ ಬೃಹದಾಕಾರದ ಗುಂಡಿಗಳು ಬಿದ್ದ ಪರಿಣಾಮ ಸೇತುವೆ ಸಡಿಲಿಕೆಯಾಗಿ ಕೊಚ್ಚಿಕೊಂಡು ಹೋಗುವ ಅಪಾಯ ಎದುರಾಗಿದೆ.

ರಸ್ತೆ ಹಾಗೂ ಸೇತುವೆಗೆ ಆಗಿರುವ ಹಾನಿಯ ಬಗ್ಗೆ ಈ ಹಿಂದೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಹಲವಾರು ಬಾರಿ ತಿಳಿಸಿದರೂ ಪ್ರಯೋಜನ ಇಲ್ಲದಂತಾಗಿದೆ. ಬೇಗನೆ ಮೇಲಧಿಕಾರಿಗಳು ಇತ್ತ ಗಮನ ಹರಿಸಿ ರಸ್ತೆಯ ದುರಸ್ತಿ ಕಾರ್ಯ ಕೈಗೊಳ್ಳಬೇಕು. | ಸಂದೀಪ ಪಾಟೀಲ ಬೆಣಚಿ ಗ್ರಾಮ ಪಂಚಾಯಿತಿ ಸದಸ್ಯ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net