

ಕಿನ್ನಿಗೋಳಿ: ಯಕ್ಷಗಾನ ಮತ್ತು ತಾಳಮದ್ದಳೆಯಂತಹ ಪ್ರಕಾರಗಳು ಜನರನ್ನು ಸಂಸ್ಕಾರಯುತರನ್ನಾಗಿ ಮಾಡುತ್ತದೆ. ಅಲ್ಲದೆ ಪರಿಶುದ್ಧ ಕನ್ನಡವನ್ನು ಉಳಿಸಿ ಬೆಳೆಸುವ ಕಾರ್ಯ ಮಾಡುತ್ತಿದೆ ಎಂದು ಕರ್ಣಾಟಕ ಬ್ಯಾಂಕ್ ಮಂಗಳೂರು ಕೇಂದ್ರ ಕಚೇರಿಯ ಮಂಗಳೂರು ವಿಭಾಗದ ಮುಖಸ್ಥ, ಉಪ ಮಹಾಪ್ರಬಂಧಕ ವಿಶ್ವನಾಥ ಹೇಳಿದರು.
ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ, ಕಿನ್ನಿಗೋಳಿಯ ಯಕ್ಷಲಹರಿ ಮತ್ತು ಯುಗಪುರುಷದ ಆಶ್ರಯದಲ್ಲಿ ಯಕ್ಷಲಹರಿಯ 35 ವರ್ಷದ ಸಂಭ್ರಮ ಪ್ರಯುಕ್ತ ಕರ್ಣಾಟಕ ಬ್ಯಾಂಕ್ ಯಕ್ಷಗಾನ ತಾಳಮದ್ದಲೆ ಸ್ಪರ್ಧಾ ಸಪ್ತಾಹ ಶ್ರೀರಾಮ ಕಥಾ ಮಾಲಿಕಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿಶ್ವ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮುಖ್ಯ ಅತಿಥಿಯಾಗಿದ್ದರು. ಕಟೀಲಿನ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ಶುಭ ಹಾರೈಸಿದರು. ಲಯನ್ಸ್ ಮಾಜಿ ಅಧ್ಯಕ್ಷೆ ಹಿಲ್ಡಾ ಡಿಸೋಜ ಯಕ್ಷಲಹರಿಯ ಸ್ಥಾಪಕ ಅಧ್ಯಕ್ಷ ಶ್ರೀನಿವಾಸ ಭಟ್ ಸಂಸ್ಮರಣಾ ಭಾಷಣಗೈದರು. ಕಸಾಪ ಮಾಜಿ ಅಧ್ಯಕ್ಷ ಡಾ.ಹರಿಕೃಷ್ಣ ಪುನರೂರು, ಮೂಡುಬಿದಿರೆ ಉದ್ಯಮಿ ಶ್ರೀಪತಿ ಭಟ್, ಉದ್ಯಮಿ ಪೃಥ್ವಿರಾಜ ಆಚಾರ್ಯ ಕಿನ್ನಿಗೋಳಿ, ಧಾರ್ಮಿಕ ಪರಿಷತ್ ಸದಸ್ಯ ಸುಬ್ರಹ್ಮಣ್ಯ ಭಟ್ ಕೊರಿಯಾರ್, ರೋಟರಿ ಮಾಜಿ ಅಧ್ಯಕ್ಷ ಧನಂಜಯ ಪಿ.ಶೆಟ್ಟಿಗಾರ್, ಕಿನ್ನಿಗೋಳಿ ಕರ್ಣಾಟಕ ಬ್ಯಾಂಕ್ ಶಾಖೆಯ ಪ್ರಬಂಧಕ ಶರತ್ ಕೆ.ಪಿ, ಜಗದೀಶ ಹೊಳ್ಳ, ದೀಪ್ತಿ ಬಾಲಕೃಷ್ಣ ಭಟ್, ಅಶ್ವಥ ರಾವ್, ಉಮೇಶ್ ನೀಲಾವರ, ಸುಧಾಕರ ಕುಲಾಲ್, ರಂಜಿತ್ ಆಚಾರ್ಯ, ಭವಿಷ್ ಶೆಟ್ಟಿ, ಆಕಾರ್ ರಾವ್ ಉಪಸ್ಥಿತರಿದ್ದರು.
ಹಿರಿಯ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಬೈಪಡಿತ್ತಾಯ ನಂದಳಿಕೆ ಅವರನ್ನು ಗೌರವಿಸಲಾಯಿತು. ಯುಗಪುರುಷದ ಸಂಪಾದಕ ಭುವನಾಭಿರಾಮ ಉಡುಪ ಪ್ರಸ್ತಾಪಿಸಿದರು. ಶ್ರೀವತ್ಸ ಭಟ್ ಸನ್ಮಾನಪತ್ರ ವಾಚಿಸಿದರು. ಉಪಾಧ್ಯಕ್ಷ ಪಶುಪತಿ ಶಾಸ್ತ್ರಿ ಶಿರಂಕಲ್ಲು ಸ್ವಾಗತಿಸಿದರು. ವಿನಯ ಆಚಾರ್ ವಂದಿಸಿದರು. ಕಾರ್ಯದರ್ಶಿ ವಸಂತ ದೇವಾಡಿಗ ಪಂಜ ಕಾರ್ಯಕ್ರಮ ನಿರೂಪಿಸಿದರು. ಬಳಿಕ ತಾಳಮದ್ದಳೆ ಸ್ಪರ್ಧೆ ನಡೆಯಿತು.