

ವಿಜಯವಾಣಿ ಸುದ್ದಿಜಾಲ ಮಧುರೆ
ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು, ತಮ್ಮ ಪಾಲಕರಿಗೆ ಹಾಗೂ ನಾಡಿಗೆ ಕೀರ್ತಿ ತರುವ ಕೆಲಸ ಮಾಡಬೇಕು ಎಂದು ಕನಸವಾಡಿ ಕನಸವಾಡಿ ಪದವಿಪೂರ್ವ ಕಾಲೇಜು ಪ್ರಾಂಶುಪಾಳ ಉಪೇಂದ್ರರಾವ್ ಕಿವಿಮಾತು ಹೇಳಿದರು.
ದೊಡ್ಡಬಳ್ಳಾಪುರ ತಾಲೂಕು ಮಧುರೆ ಹೋಬಳಿಯ ಕನಸುವಾಡಿ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಹಾಗೂ ಶಿಕ್ಷಣ ಸಾಮಗ್ರಿ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರಕಿಸಿಕೊಡುವ ನಿಟ್ಟಿನಲ್ಲಿ ಸರ್ಕಾರ ಹಲವು ಕಾರ್ಯಕ್ರಮಗಳನ್ನು ರೂಪಿಸಿದೆ. ವಿದ್ಯಾರ್ಥಿಗಳಿಗೆ ಹಲವು ಸವಲತ್ತುಗಳನ್ನು ನೀಡುತ್ತಿದೆ ಇದರ ಜತೆಗೆ ದಾನಿಗಳೂ ಸಹ ಸರ್ಕಾರಿ ಶಾಲೆ ಮಕ್ಕಳಿಗಾಗಿ ಸಹಾಯ ಹಸ್ತ ಚಾಚುತ್ತಿದ್ದು ಸೌಲಭ್ಯಗಳನ್ನು ಸದ್ಭಳಕೆ ಮಾಡಿಕೊಂಡು ಉತ್ತಮ ಶಿಕ್ಷಣ ಪಡೆಯಬೇಕು ಎಂದು ಹೇಳಿದರು. ಹಲವರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ, ಅದೇ ರೀತಿ ಭವಿಷ್ಯದಲ್ಲಿ ವಿದ್ಯಾರ್ಥಿಗಳು ಉತ್ತಮ ಸ್ಥಾನ ಪಡೆದು ಬಳಿಕ ಸಮಾಜಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಮಹತ್ವದ ಘಟ್ಟ: ವಿದ್ಯಾರ್ಥಿ ಜೀವನ ಮುಂದಿನ ಭವಿಷ್ಯದಲ್ಲಿ ಮಹತ್ವದ ಘಟ್ಟವಾಗಿದೆ, ವಿದ್ಯಾರ್ಥಿ ದಿಸೆಯಲ್ಲಿ ಶಿಕ್ಷಣದ ಕಡೆ ಒತ್ತು ನೀಡಬೇಕು ಎಂದು ಗ್ರಾಪಂ ಸದಸ್ಯ ವಿಜಯ್‌ಕುಮಾರ್ ಹೇಳಿದರು. ವಿದ್ಯಾರ್ಥಿಗಳಿಗೆ ನೀಡಿರುವ ಶಿಕ್ಷಣದ ಪರಿಕರಗಳನ್ನು ಸದ್ಘಳಕೆ ಮಾಡಿಕೊಂಡು ಉತ್ತಮ ಲಿತಾಂಶ ಪಡೆಯುವತ್ತ ಗಮನ ನೀಡಬೇಕು ಎಂದು ಮನವಿ ಮಾಡಿದರು.