ಅಮೃತಭಾರತಿ ವಿದ್ಯಾಲಯದಲ್ಲಿ ಪ್ರತಿಭಾ ಪುರಸ್ಕಾರ

hbr (1)
Published on

ವಿಜಯವಾಣಿ ಸುದ್ದಿಜಾಲ ಹೆಬ್ರಿ

ಹೆಬ್ರಿ ಪಿಆರ್‌ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿಷಯವಾರು ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಗೌರವ ಕಾರ್ಯಕ್ರಮ ನಡೆಯಿತು.

ವಿದ್ಯಾಲಯದ ಅಧ್ಯಕ್ಷ ಶೈಲೇಶ್ ಕಿಣಿ ಮಾತನಾಡಿ, ವಿದ್ಯಾರ್ಥಿಗಳು ಗುರಿಯನ್ನು ಸಾಧಿಸಲು ಅಚಲವಾದ ಏಕಾಗ್ರತೆ ಹೊಂದಿರಬೇಕು. ವಿದ್ಯಾರ್ಥಿಗಳ ಜೀವನ ಯಶಸ್ಸು, ಕೀರ್ತಿಯಿಂದ ಸಮಾಜಕ್ಕೆ ಆದರ್ಶವಾಗಲಿ ಎಂದರು.

ಸಂಸ್ಥೆಯ ಮುಖ್ಯಸ್ಥರಾದ ಅಪರ್ಣಾ ಆಚಾರ್, ಶಕುಂತಲಾ, ಶಿಕ್ಷಕರಾದ ಮಹೇಶ್ ಹೈಕಾಡಿ, ಸಾವಿತ್ರಿ ಕಿಣಿ, ವೇದವ್ಯಾಸ ತಂತ್ರಿ, ಪಂಚಮಿ, ಮೀನಾಕ್ಷಿ, ನಿಶಾನ್ ಶೆಟ್ಟಿ, ಸುಮನ್ ನಾಯಕ್, ಸುಮನಾವಾಣಿ, ಸೌಪರ್ಣಿಕಾ ಜೋಷಿ, ನವ್ಯಾ ಪೈ, ವಿದ್ಯಾರ್ಥಿಗಳು , ಗುರೂಜಿ, ಮಾತಾಜಿಯವರು ಉಪಸ್ಥಿತರಿದ್ದರು. ವಿದ್ವಾನ್ ವೇದವ್ಯಾಸ ತಂತ್ರಿ ಮಡಾಮಕ್ಕಿ ನಿರೂಪಿಸಿ, ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net