ಸಂತ ಜೋಸೆಫ್ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

award
Published on

ಕುಂದಾಪುರ: ಸಂತ ಜೋಸೆಫ್ ಪ್ರೌಢ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಶನಿವಾರ ನಡೆಯಿತು. ಕುಂದಾಪುರ ಹೋಲಿ ರೋಜರಿ ಮಾತಾ ಚರ್ಚ್ ಧರ್ಮಗುರು ಪಾವ್ಲ್ ರೇಗೊ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಶುಭಹಾರೈಸಿದರು.

ಸಂತ ಜೋಸೆಫ್ ಕಾನ್ವೆಂಟಿನ ಮುಖ್ಯಸ್ಥೆ ಸುಪ್ರಿಯಾ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ವಿನೋದ್ ಕ್ರಾಸ್ಟೊ ಶುಭಾಶಂಸನೆಗೈದರು. ಪಾವ್ಲ್ ರೇಗೊ, ವಿನೋದ್ ಕ್ರಾಸ್ಟೊ, ಜಿಲ್ಲಾಮಟ್ಟದ ವಿಶೇಷ ಮಕ್ಕಳ ಕ್ರೀಡೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ರೀಶೆಲ್ ಡಿಸೋಜಾ, ಶಾಲಾ ತೋಟಗಾರಿಕಾ ಸ್ಫರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶಿಕ್ಷಕಿ ಸೆಲಿನ್ ಡಿಸೋಜ ಅವರನ್ನು ಸನ್ಮಾನಿಸಲಾಯಿತು.

ಸಂತ ಜೋಸೆಫ್ ಪ್ರಾಥಮಿಕ ಶಾಲೆ ಮುಖ್ಯಸ್ಥೆ ಪ್ರೇಮಿಕಾ, ಶಿಕ್ಷಕರಕ್ಷಕ ಸಂಘದ ಅಧ್ಯಕ್ಷೆ ಗ್ರೇಸಿ ಡಿಸೋಜ ಉಪಸ್ಥಿತರಿದ್ದರು. ಮುಖ್ಯಶಿಕ್ಷಕಿ ಐವಿ ವರದಿ ವಾಚಿಸಿದರು. ಮೈಕಲ್ ಪುರ್ಟಾರ್ಡೊ, ಶ್ರೀಲತಾ, ಸೆಲಿನ್ ಡಿಸೋಜ, ಗುಮಾಸ್ತೆ ಪ್ರತಿಮಾ ಬಹುಮಾನಿತರ ಪಟ್ಟಿ ವಾಚಿಸಿದರು. ಸರಸ್ವತಿ ವಂದಿಸಿದರು. ಅಶೋಕ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net