ಸಂತ ಮೇರಿಸ್ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

gan-5
Published on

ಕುಂದಾಪುರ: ಸಂತ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಶನಿವಾರ ನಡೆಯಿತು. ಕುಂದಾಪುರ ರೋಜರಿ ಮಾತಾ ಚರ್ಚ್ ಧರ್ಮಗುರು ಪಾವ್ಲ್ ರೇಗೊ ಅಧ್ಯಕ್ಷತೆ ವಹಿಸಿದ್ದರು.

ಕುಂದಾಪುರ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಭಾಕರ ವಿ. ಅವರನ್ನು ಸನ್ಮಾನಿಸಲಾಯಿತು. ಎಸ್‌ಡಿಎಂಸಿ ಸದಸ್ಯರಾದ್ ಬರ್ನಾಡ್ ಡಿಕೋಸ್ತಾ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಶಾಂತಿ ರಾಣಿ ಬರೆಟ್ಟೊ ಸ್ವಾಗತಿಸಿದರು. ಜ್ಯೋತಿ ಡಿಸಿಲ್ವ ವಂದಿಸಿದರು. ಶ್ರೀಮತಿ, ಆಶಾ, ಪ್ರೀತಿ, ಗೀತಾ ನೊರೊನ್ಹಾ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net