ಅ.12 ರಂದು ರಂಗಮಂದಿರದಲ್ಲಿ ಪ್ರತಿಭಾ ಪುರಸ್ಕಾರ

K.AYYANNA VADAVTTI
K.AYYANNA VADAVTTI
Published on

ರಾಯಚೂರು ಕೆಸಿಬಿ ಅಂಡ್ ಸನ್ಸ್‌ಹಾಗೂ ಜಿಲ್ಲಾ ಕನಕ ನೌಕರರ ಸಂಘದಿಂದ ಅ.12 ರಂದು ಬೆಳಗ್ಗೆ 10 ಗಂಟೆಗೆ ನಗರದ ಪಂ.ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಮಟ್ಟದ ಪ್ರತಿಭಾ ಪುರಸ್ಕಾರ ಹಾಗೂ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆಂದು ಕೆಸಿಬಿ ಅಂಡ್ ಸನ್ಸ್‌ನ ಮಾಲೀಕ ಕೆ. ಅಯ್ಯಣ್ಣ ವಡವಾಟಿ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಮಾರಂಭವನ್ನು ಎಂಎಲ್ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಚ್.ಎಂ. ರೇವಣ್ಣ, ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್, ಸಣ್ಣ ನೀರಾವರಿ ಸಚಿವ ಎನ್. ಎಸ್.ಬೋಸರಾಜು ಸೇರಿ ಅನೇಕರು ಆಗಮಿಸಲಿದ್ದಾರೆ.

ಜಿಲ್ಲೆಯ ಎಲ್ಲ ತಾಲೂಕುಗಳಿಂದ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 90ರಷ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಮುಖಂಡರಾದ ರಾಜಶೇಖರ್ ದಿನ್ನಿ, ಹನುಮಂತಪ್ಪ , ಈರಣ್ಣ ಪೂಜಾರಿ, ನಾಗರಾಜ, ಬಜಾರಪ್ಪ ,ಜಗದೀಶ್ ಇದ್ದರು.

 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net