

ಕುಂದಾಪುರ: ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ 2025-26ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ, ಪ್ರತಿಭಾ ಪುರಸ್ಕಾರ ಸಮಾರಂಭ ಕಾಲೇಜಿನ ರೋಟರಿ ಲಕ್ಷ್ಮೀನರಸಿಂಹ ಕಲಾ ಮಂದಿರದಲ್ಲಿ ಶನಿವಾರ ನಡೆಯಿತು.
ಉಪ್ಪುಂದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲೆ ಸುಶೀಲಾ ಹೊಳ್ಳ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾಲೇಜು ಪ್ರಾಂಶುಪಾಲ ರಾಮಕೃಷ್ಣ ಬಿ.ಈ. ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ಪುರಸಭೆ ಅಧ್ಯಕ್ಷ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮೋಹನದಾಸ ಶೆಣೈ ಶುಭ ಹಾರೈಸಿದರು. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ 88 ವಿದ್ಯಾರ್ಥಿಗಳಿಗೆ ನಗದು ಬಹುಮಾನ, ಪ್ರಮಾಣಪತ್ರ ನೀಡಿ ಗೌರವಿಸಲಾಯಿತು.
ಹಿರಿಯ ಉಪನ್ಯಾಸಕ ಚಂದ್ರಶೇಖರ ಸ್ವಾಗತಿಸಿದರು. ವನಿತಾ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಜೋತ್ಸ್ನಾ ಪೈ ಪ್ರತಿಭಾ ಪುರಸ್ಕೃತರ ಪಟ್ಟಿ ವಾಚಿಸಿದರು. ಕೇಶವ ಪಿ. ಕಾರ್ಯಕ್ರಮ ನಿರೂಪಿಸಿದರು. ಗೀತಾ ಕುಂದರ್ ವಂದಿಸಿದರು.