ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

27spt1
ಸೋಮವಾರಪೇಟೆ ತಾಲೂಕು ಪತ್ರಕರ್ತರ ಸಂಘ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪತ್ರಕರ್ತರ ಮಕ್ಕಳನ್ನು ಅಭಿನಂದಿಸಲಾಯಿತು. ಈಶ್ವರಚಂದ್ರ ಸಾಗರ್, ಹರೀಶ್, ಬಿ.ಸಂಜೀವ, ಲೋಕೇಶ್, ಕವನ್ ಇದ್ದರು.
Published on

ಸೋಮವಾರಪೇಟೆ: ಸಮಾಜ ಕಟ್ಟುವ ಕಾರ್ಯದಲ್ಲಿ ಮಾಧ್ಯಮಗಳ ಪಾತ್ರ ಶ್ಲಾಘನೀಯ ಎಂದು ಹಿರಿಯ ವಕೀಲ ಹಾಗೂ ನೋಟರಿ ಈಶ್ವರಚಂದ್ರ ವಿದ್ಯಾಸಾಗರ್ ಅಭಿಪ್ರಾಯಪಟ್ಟರು.

ತಾಲೂಕು ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪತ್ರಿಕಾ ಮಾಧ್ಯಮದವರು ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ದೃಶ್ಯ ಮಾಧ್ಯಮದಲ್ಲಿ ಅಪರಾಧ ಸುದ್ದಿಗಳನ್ನು ಅತಿ ಹೆಚ್ಚು ವೈಭವೀಕರಿಸುವುದಕ್ಕೆ ಕಡಿವಾಣ ಹಾಕಬೇಕು ಎಂದು ಸಲಹೆ ನೀಡಿದರು.

ವಿದ್ಯಾರ್ಥಿಗಳು ಪ್ರಸ್ತುತ ದಿನಗಳಲ್ಲಿ ಮೊಬೈಲ್ ಬಳಕೆ ಮಾಡುವ ಮೂಲಕ ಸಮಯವನ್ನು ವ್ಯರ್ಥಮಾಡುತ್ತಿದ್ದಾರೆ. ಆ ಚಟದಿಂದ ಹೊರಬಂದು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಹೇಳಿದರು.

ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಚ್.ಟಿ.ಅನಿಲ್ ಮಾತನಾಡಿ, ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮಾಡುವ ಮೂಲಕ ಅವರ ಭವಿಷ್ಯಕ್ಕೆ ಮುನ್ನುಡಿ ಬರೆಯಲಾಗಿದೆ. ಇಂತಹ ಅವಕಾಶಗಳನ್ನು ವಿದ್ಯಾರ್ಥಿಗಳು ಬಳಸಿಕೊಂಡು ಮುಂದುವರಿಯಬೇಕು ಎಂದು ಕಿವಿಮಾತು ಹೇಳಿದರು.

ಪತ್ರಕರ್ತರ ಮಕ್ಕಳನ್ನು ಈ ಸಂದರ್ಭ ಅಭಿನಂದಿಸಲಾಯಿತು. ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಹರೀಶ್ ಕುಮಾರ್, ಕಾರ್ಯದರ್ಶಿ ಡಿ.ಪಿ.ಲೋಕೇಶ್, ಉಪಾಧ್ಯಕ್ಷ ಎಸ್.ಎ.ಮುರಳೀಧರ್, ಜಿಲ್ಲಾ ಉಪಾಧ್ಯಕ್ಷ ಕವನ್ ಕಾರ್ಯಪ್ಪ, ಪಟ್ಟಣ ಪಂಚಾಯಿತಿ ಸದಸ್ಯ ಬಿ.ಸಂಜೀವ, ಇನ್‌ಸ್ಪೆಕ್ಟರ್ ಮುದ್ದುಮಹಾದೇವ ಇದ್ದರು. ಪತ್ರಕರ್ತರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net