ಎಸ್‌ಎಸ್‌ಎಲ್​ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ; ಅಪೊಲೊ ಶಾಲೆಯಲ್ಲಿ ಕಾರ್ಯಕ್ರಮ

apolo
Published on

ಬೆಂಗಳೂರು: ನಗರದ ಹೆಗ್ಗನಹಳ್ಳಿ ಕ್ರಾಸ್‌ನಲ್ಲಿರುವ ಅಪೊಲೊ ಪಬ್ಲಿಕ್ ಶಾಲೆ ಹಾಗೂ ಅಪೊಲೊ ಅಕ್ಷರಧಾಮ ಶಾಲೆಯಲ್ಲಿ 2024-25 ಸಾಲಿನ ಎಸ್.ಎಸ್.ಎಲ್.ಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿರುವ ವಿದ್ಯಾರ್ಥಿಗಳನ್ನು ಶಾಲೆಯ ವತಿಯಿಂದ ಪುರಸ್ಕರಿಸಲು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ವಿಶೇಷ ಜಿಲ್ಲಾಧಿಕಾರಿ ಸೂರಜ್.ಎ.ಆರ್ ಬೆಂಗಳೂರು ಉತ್ತರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಪವನ್. ಎನ್. ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಲಾ ಸಂಸ್ಥಾಪಕ ಅಧ್ಯಕ್ಷರಾದ ಟಿ. ಸಿ .ನಾಗರಾಜ್, ನಮ್ಮ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದರಿಂದ ರಾಜ್ಯದಲ್ಲಿ ಪ್ರಥಮ ಸ್ಥಾನ ಗಳಿಸಲು ಸಾಧ್ಯವಾಗಿದೆ. ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ನೀಡುವತ್ತ ಗಮನಹರಿಸಿದ್ದೇವೆ. ಜಾತಿ, ಧರ್ಮ, ಸಮುದಾಯದ ಭೇದವಿಲ್ಲದೆ ಸಮಾನತೆಯೊಂದಿಗೆ ಶಿಕ್ಷಣ ನೀಡುವುದು ನಮ್ಮ ಗುರಿ ಎಂದರು.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಪ್ರೇಮ, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಹಾಗೂ ಪಾಲಕರು ಪಾಲ್ಗೊಂಡಿದ್ದರು.

100 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್

ಅಪೊಲೊ ಶಿಕ್ಷಣ ಸಂಸ್ಥೆಯಲ್ಲಿ ಒಟ್ಟು 100 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದು ರಾಜ್ಯಕ್ಕೆ ಮೊದಲ 7 ಸ್ಥಾನ ಪಡೆದಿದ್ದಾರೆ. 625 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದ ವರುಣಿಕಳಿಗೆ 25 ಸಾವಿರ ನಗದು ಬಹುಮಾನ ನೀಡಿ ಗೌರವಿಸಲಾಯಿತು. ನಂದಿತಾ.ಕೆ 624, ದಿಶಾ. ಡಿ 623 ,ನವೀನ್ .ಸಿ.ಎಂ .622, ಹರ್ಷಿತ .ಸಿ. 621, ಸುಜಲ್ ಶೆಟ್ಟಿ 620, ವಿನಯ್.ಟಿ. 620 ,ಲಿಖಿತ್ ಗೌಡ. ಆರ್. 619, ಅಂಕಗಳನ್ನು ಪಡೆದಿದ್ದು, ಈ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿ ಶುಭ ಹಾರೈಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net