ಜೂ.01 ರಂದು ಗಾಣಿಗ ಸಮಾಜದಿಂದ ಪ್ರತಿಭಾ ಪುರಸ್ಕಾರ

BASAPPA HALLI
BASAPPA HALLI
Published on

 ರಾಯಚೂರು ಜಿಲ್ಲಾ ಹಾಗೂ ತಾಲೂಕು ಮಟ್ಟದ ಗಾಣಿಗ ಸಮಾಜದಿಂದ ಜೂನ್ 1 ರಂದು ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಗಾಣಿಗ ಸಮಾಜದಿಂದ ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ವೈದ್ಯಕೀಯ ವಿಭಾಗದ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆಂದು ತಾಲೂಕು ಅಧ್ಯಕ್ಷ ಬಸಪ್ಪ ಹಳ್ಳಿ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ವರ್ಷದಿಂದ ಸಾಧನೆ ಮಾಡಿದ ಸಮಾಜದ ವಿದ್ಯಾರ್ಥಿಗಳು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಗುತ್ತಿದ್ದು, ಈ ವರ್ಷವೂ ಅದ್ದೂರಿಯಾಗಿ ಕಾರ್ಯಕ್ರಮವನ್ನು ಮಾಡಲು ತೀರ್ಮಾನ ಮಾಡಲಾಗಿದೆ.

ಕಾರ್ಯಕ್ರಮದ ಸಾನಿಧ್ಯವನ್ನು ವಿಜಯಪುರದ ಶ್ರೀ ಮುರುಘರಾಜೇಂದ್ರ ಮಠದ ಶ್ರೀ ಡಾ.ಜಯಬಸವಕುಮಾರ ಸ್ವಾಮಿಗಳು , ಅಭಿನವ ರಾಚೋಟಿವೀರ ಶಿವಾಚಾರ್ಯರು, ಶಾಂತಮಲ್ಲ ಶಿವಾಚಾರ್ಯರು, ಸಂಗಮೇಶ್ವರ ಶಿವಾಚಾರ್ಯರು ವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಜಿ.ಕುಮಾರ ನಾಯಕ್, ಶಾಸಕ ಡಾ.ಶಿವರಾಜ ಪಾಟೀಲ್, ಬಸನಗೌಡ ದದ್ದಲ್ ಸೇರಿ ಅನೇಕರು ಆಗಮಿಸಲಿದ್ದಾರೆಂದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಚನ್ನಪ್ಪ ಸಜ್ಜನ್, ಪ್ರಭುಲಿಂಗ ಸಜ್ಜನ್, ಉಮೇಶ ಸಜ್ಜನ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net