

ವಿಜಯವಾಣಿ ಸುದ್ದಿಜಾಲ ಉಡುಪಿ
ವಳಕಾಡಿನಲ್ಲಿರುವ ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಅನ್ನಪೂರ್ಣಾ ಭೋಜನ ಶಾಲೆಯ ವಿಸ್ತರಿಸಿದ ಮೇಲ್ಛಾವಣಿ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ವಿತರಣೆ ಕಾರ್ಯಕ್ರಮ ಜುಲೈ 14ರಂದು ನಡೆಯಿತು.
ಮಣಿಪಾಲ ಪೇಮೆಂಟ್ ಆ್ಯಂಡ್ ಐಡೆಂಟಿಟಿ ಸೊಲ್ಯೂಷನ್ನ ಸಿಎಸ್ಆರ್ ಫಂಡ್ನ 5 ಲಕ್ಷ ರೂ. ಕೊಡುಗೆಯಲ್ಲಿ ನಿರ್ಮಿಸಿದ ಮೇಲ್ಛಾವಣಿಯನ್ನು ಶಾಸಕ ಯಶ್ಪಾಲ್ ಸುವರ್ಣ ಉದ್ಘಾಟಿಸಿದರು. ಕಾಮಗಾರಿಗೆ ಸಹಕರಿಸಿದ ದಾನಿಗಳಾದ ರೋನಾಲ್ಡ್ ಡಿಸೋಜ ಹಾಗೂ ಸುದರ್ಶನ ಶೇರಿಗಾರ ಅವರನ್ನು ಗೌರವಿಸಲಾಯಿತು.
ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಪೂರ್ಣಿಮಾ ಸ್ವಾಗತಿಸಿದರು. ಸಹ ಶಿಕ್ಷಕ ಶಿವರಾಮ ಶೆಟ್ಟಿ ವಂದಿಸಿದರು. ಕನ್ನಡ ಶಿಕ್ಷಕಿ ತಾರಾಮತಿ ಕಾರ್ಯಕ್ರಮ ನಿರೂಪಿಸಿದರು.
ಸರ್ಕಾರದಿಂದ ಎಲ್ಲ ಸೌಲಭ್ಯ ಒದಗಿಸಲು ಸಾಧ್ಯವಾಗುವುದಿಲ್ಲ. ದಾನಿಗಳು, ಸಂಘ-ಸಂಸ್ಥೆಗಳು ಶಿಕ್ಷಣ ಕ್ಷೇತ್ರಕ್ಕೆ ಬೇಕಿರುವ ಅಗತ್ಯ ಸೌಕರ್ಯದ ಸಹಕಾರ ನೀಡಿದಾಗ ಮಕ್ಕಳಿಗೆ ಉತ್ತಮವಾಗಿ ಜ್ಞಾನಾರ್ಜನೆ ಮಾಡಲು ಅನುಕೂಲವಾಗುತ್ತದೆ. ವಿದ್ಯಾರ್ಥಿಗಳು ಚೆನ್ನಾಗಿ ಓದಿ ಶಾಲೆ ಹಾಗೂ ಊರಿನ ಕೀರ್ತಿ ಹೆಚ್ಚಿಸಬೇಕು. | ಯಶ್ಪಾಲ್ ಸುವರ್ಣ. ಉಡುಪಿ ಶಾಸಕ