

ಚಳ್ಳಕೆರೆ: ನಗರದ ಅನಂತನಾಥ ಜೈನ ಭವನದಲ್ಲಿ ಸೆ.3ರ ಬೆಳಗ್ಗೆ 11 ಗಂಟೆಗೆ ಜಿಲ್ಲಾ ಮಾದಿಗ ನೌಕರರ ಸಾಂಸ್ಕೃತಿಕ ಸಂಘ ವತಿಯಿಂದ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ.
ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮಿ, ಶ್ರೀ ಷಡಕ್ಷರ ಮುನಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಶಾಸಕ ಟಿ. ರಘುಮೂರ್ತಿ ಉದ್ಘಾಟನೆ ಮಾಡಲಿದ್ದಾರೆ.
ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಅಬಕಾರಿ ಇಲಾಖೆ ಸಚಿವ ಆರ್.ಬಿ.ತಿಮ್ಮಾಪುರ್, ಶಾಸಕರಾದ ಎನ್.ವೈ.ಗೋಪಾಲಕೃಷ್ಣ, ಕೆ.ಸಿ.ವೀರೇಂದ್ರ ಪಪ್ಪಿ, ಮಾಜಿ ಸಚಿವ ಎಚ್.ಆಂಜನೇಯ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಕೆ.ಜಿ.ಜಗದೀಶ್, ಎಂ.ಮಲ್ಲಿಕಾರ್ಜುನ, ಎಂ.ರೇವಣಸಿದ್ದಪ್ಪ, ಡಿ.ಟಿ. ಜಗನ್ನಾಥ, ಸಿ. ಚಂದ್ರಪ್ಪ, ಎಂ.ಕೆ. ಬಸವರಾಜ್, ಎನ್. ರಾಘವೇಂದ್ರ ಮತ್ತಿತರರು ಭಾಗವಹಿಸಲಿದ್ದಾರೆ.