ಅ.೨೦ರಂದು ಪ್ರತಿಭಾ ಪುರಸ್ಕಾರ

gowda
Published on

ಮಡಿಕೇರಿ: ಕೊಡಗು ಗೌಡ ವಿದ್ಯಾಸಂಘದ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸುವ ಕಾರ್ಯಕ್ರಮವನ್ನು ವರ್ಷಂಪ್ರತಿ ಹಮ್ಮಿಕೊಂಡು ಬರಲಾಗುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಅ.೨೦ ರಂದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ನಗರದ ಕೊಡಗು ಗೌಡ ಸಮಾಜದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಅಂಬೆಕಲ್ಲು ನವೀನ್ ಕುಶಾಲಪ್ಪ ತಿಳಿಸಿದರು.

ಅಂದು ಬೆಳಗ್ಗೆ ೧೦ ಗಂಟೆಗೆ ತನ್ನ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಸಮಾರಂಭದ ಉದ್ಘಾಟನೆಯನ್ನು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಬಾರಿಕೆ.ಪಿ.ದಿನೇಶ್ ಕುಮಾರ್ ಉದ್ಘಾಟಿಸಲಿದ್ದು, ಕಾರ್ಯಕ್ರಮದಲ್ಲಿ ಪ್ರಮುಖರಾದ ನಂಗಾರು.ಆರ್.ನಾಣಯ್ಯ, ತಳೂರು ಯಶೋಧ ಸೋಮಣ್ಣ, ಆನೇರ ಜಾನಕಿ ಮೋಹನ್, ಚೆರಿಯಮನೆ.ಬಿ.ರಾಮಚಂದ್ರ, ನಿಡ್ಯಮಲೆ ದೇವಕಿ ಅನುರಾಜ್ ಪಾಲ್ಗೊಳ್ಳಿಲಿದ್ದಾರೆ. ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಸಾಧಕ ೮೦ ವಿದ್ಯಾರ್ಥಿಗಳನ್ನು ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮೂವರು ಸಾಧಕರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ತಿಳಿಸಿದರು.

ಸಂಘದ ಉಪಾಧ್ಯಕ್ಷರಾದ ಆಮೆ.ಸಿ.ಸೀತಾರಾಮ್, ಗೌರವ ಕಾರ್ಯದರ್ಶಿ ಪಿ.ಕೆ.ಉದಯ್‌ಕುಮಾರ್, ಕೆ.ಟಿ.ವಿನೋದ್ ಕುಮಾರ್, ಸಿ.ಎನ್.ಅಪ್ಪಯ್ಯ, ಪಿ.ರೇವತಿ ರಮೇಶ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net