ಜೆ.ಎಸ್.ಜಗದೀಶ್ ಬಳಗದ ವತಿಯಿಂದ ಮೇ 31ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

WhatsApp Image 2025-05-22 at 2.28.51 PM
Published on

ಮೈಸೂರು: ಜೆ.ಎಸ್.ಜಗದೀಶ್ ಬಳಗದ ವತಿಯಿಂದ 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಮೇ 31ರಂದು ಸಂಜೆ 5 ಗಂಟೆಗೆ ನಿವೇದಿತ ನಗರದ ಎಸ್.ಆರ್.ಸುಬ್ಬರಾವ್ ಉದ್ಯಾನದಲ್ಲಿ ಆಯೋಜಿಸಲಾಗಿದೆ.

ನಗರ ಪಾಲಿಕೆ ಮಾಜಿ ಸದಸ್ಯ ಜೆ.ಎಸ್.ಜಗದೀಶ್ ನೇತೃತ್ವದಲ್ಲಿ ಆಯೋಜಿಸಿರುವ ಕಾರ್ಯಕ್ರಮವನ್ನು ಸಂಸದರು ಆದ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಉದ್ಘಾಟಿಸಲಿದ್ದಾರೆ.

ಮಾಜಿ ಸಂಸದ ಪ್ರತಾಪ್ ಸಿಂಹ ವಿದ್ಯಾರ್ಥಿಗಳನ್ನು ಅಭಿನಂದಿಸಲಿದ್ದಾರೆ. ಶಾಸಕ ಜಿ.ಟಿ.ದೇವೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ನೈಪುಣ್ಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ರಘು ಆರ್.ಕೌಟಿಲ್ಯ ಶುಭನುಡಿ ಹೇಳಲಿದ್ದಾರೆ. ಶಾಸಕ ಟಿ.ಎಸ್.ಶ್ರೀವತ್ಸ, ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ, ವಿದ್ಯಾ ವಿಕಾಸ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಕವೀಶ್ ಗೌಡ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net