ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಶಿಕ್ಷಕರಿಗೆ ಅಭಿನಂದನೆ

WhatsApp Image 2025-02-06 at 11.53.34 AM
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ತಾಲೂಕಿನ ಹೆಬ್ಬಳ್ಳಿಯ ಕನ್ನಡಾಂಬೆ ಉತ್ಸವ ಸಮಿತಿಯಿಂದ ಫೆ. 9ರಂದು ಬೆಳಗ್ಗೆ 10.30 ಗಂಟೆಗೆ ಗ್ರಾಮದ ಹಳೆಯ ಬಸ್ ನಿಲ್ದಾಣದ ಆವರಣದಲ್ಲಿ ಹೆಬ್ಬಳ್ಳಿ ವೈಭವ ಹಾಗೂ ಜಾನಪದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಸಂತೋಷ ಭಾವಿಕಟ್ಟಿ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2023- 24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕ ಗಳಿಸಿದ ಜಿಲ್ಲೆಯ ವಿದ್ಯಾರ್ಥಿಗಳಿಗೆ ಗೌರವ ಪುರಸ್ಕಾರ ಮತ್ತು ಅವರ ಶಿಕ್ಷಕರಿಗೆ ಅಭಿನಂದನೆ ಸಲ್ಲಿಸಲಾಗುವುದು. ಹೆಬ್ಬಳ್ಳಿ ಗ್ರಾಮದ ಶ್ರೀ ಗುರು ದತ್ತಾವಧೂತ ಮಹಾರಾಜರು, ಉಪ್ಪಿನಬೆಟಗೇರಿ ಮೂರುಸಾವಿರ ವಿರಕ್ತಮಠದ ಶ್ರೀ ಗುರು ಕುಮಾರ ವಿರೂಪಾಕ್ಷ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಸಭಾಪತಿ ಬಸವರಾಜ ಹೊರಟ್ಟಿ ಗೌರವ ಉಪಸ್ಥಿತರಿರುವರು. ಉಸ್ತುವಾರಿ ಸಚಿವ ಸಂತೋಷ ಲಾಡ್ ಉದ್ಘಾಟಿಸುವರು. ಅಖಿಲ ಭಾರತ ಶಿಕ್ಷಕರ ಫೆಡರೇಷನ್‌ನ ರಾಷ್ಟ್ರೀಯ ಅಧ್ಯಕ್ಷ ಬಸವರಾಜ ಗುರಿಕಾರ ಶಿಕ್ಷಕರಿಗೆ ಗೌರವ ಸನ್ಮಾನ ಮಾಡುವರು. ಸಮಾಜಸೇವಕರಾದ ಮಂಜುನಾಥ ಮಕ್ಕಳಗೇರಿ, ಡಾ. ವಿಎಸ್‌ವಿ ಪ್ರಸಾದ ಪ್ರತಿಭಾವಂತ ಮಕ್ಕಳಿಗೆ ಗೌರವ ಪುರಸ್ಕಾರ ನೆರವೇರಿಸುವರು. ಇದು ಮೊದಲ ಪ್ರತಿಭಾ ಪುರಸ್ಕಾರವಾಗಿದ್ದು, ಪ್ರತಿವರ್ಷ ಮುಂದುವರಿಸಲಾಗುವುದು ಎಂದರು.

ಶಿವಾನಂದ ಹೂಗಾರ, ರಾಮಚಂದ್ರ ಭಜಂತ್ರಿ, ಮಂಜುನಾಥ ಭೀಮಕ್ಕನವರ, ನಾಗಪ್ಪ ಬನಪ್ಪನವರ, ಎಲ್.ಐ. ಲಕ್ಕಮ್ಮನವರ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net