ಬೇಲೂರು: ಭಾರತೀಯ ವಿದ್ಯಾರ್ಥಿ ಸಂಘದಿಂದ(ಬಿವಿಎಸ್) ಅ.7ರಂದು ಪಟ್ಟಣದ ವೀರಶೈವ ಕಲ್ಯಾಣ ಮಂಟಪದಲ್ಲಿ ಎಲ್ಲ ವರ್ಗದ 500 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಗಣ್ಯರಿಗೆ ಸನ್ಮಾನ ಹಾಗೂ ಮಕ್ಕಳಿಗೆ ನಾಮಕರಣ, ಅಕ್ಷರಾಭ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಭಾರತೀಯ ವಿದ್ಯಾರ್ಥಿ ಸಂಘದ ತಾಲೂಕು ಅಧ್ಯಕ್ಷ ಹಾಗೂ ಉಪನ್ಯಾಸಕ ಎಚ್.ಬಿ.ರಾಜು ತಿಳಿಸಿದ್ದಾರೆ.
ನಮ್ಮ ಸಂಘದಿಂದ ವಿದ್ಯಾರ್ಥಿಗಳ ಶ್ರೆಯೋಭಿವೃದ್ಧಿಗಾಗಿ ತೊಡಗಿಸಿಕೊಂಡಿದ್ದು, ಇಲ್ಲಿ ಸ್ಪಧಾತ್ಮಕ ಪರೀಕ್ಷೆಗಳಿಗೆ ತಯಾರಿ, ಉನ್ನತ ವಿದ್ಯಾಭ್ಯಾಸಕ್ಕೆ ಮಾರ್ಗದರ್ಶನ ನೀಡಲಾಗುತ್ತಿದೆ. ಜತೆಗೆ ಪ್ರತಿ ವರ್ಷದಂತೆ ಅ.7ರಂದು ಎಲ್ಲ ವರ್ಗದ 500 ಎಸ್‌ಎಸ್‌ಎಲ್‌ಸಿ/ಪಿಯುಸಿ/ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಗಣ್ಯರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಿದ್ದು, ಈ ಕಾರ್ಯಕ್ರಮದ ಸಾನ್ನಿಧ್ಯವನ್ನು ಪುಷ್ಪಗಿರಿ ಮಠದ ಶ್ರೀ ಸೋಮಶೇಖರ್ ಶಿವಾಚಾರ್ಯ ಸ್ವಾಮೀಜಿ ಮತ್ತು ಮದಘಟ್ಟ ಗಾಂಧಾರ ಬುದ್ಧ ವಿಹಾರದ ಅಧ್ಯಕ್ಷ ಬಂತೆ ಬೋಧಿದತ್ತ ಮಹಾತೇರಾ ವಹಿಸಲಿದ್ದು, ಖ್ಯಾತ ಸಂಪನ್ಮೂಲ ವ್ಯಕ್ತಿ ಅಕ್ಕ ಐಎಎಸ್ ಅಕಾಡೆಮಿ ಮುಖ್ಯಸ್ಥ ಡಾ.ಶಿವಕುಮಾರ್ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಪ್ರಗತಿಪರ ಸಂಘಟನೆಗಳ ಮುಖಂಡರು, ವಿದ್ಯಾರ್ಥಿಗಳು, ನೌಕರರು, ಪಾಲಕರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸ ಬೇಕೆಂದು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.