

ರಾಯಚೂರು ಮಹರ್ಷಿ ವಾಲ್ಮೀಕಿ ನಾಯಕ ಸಮಾಜದಿಂದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ಜು.13 ರಂದು ಕೃಷಿ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದೆಂದು ಜಿಲ್ಲಾ ವಾಲ್ಮೀಕಿ ನಾಯಕ ಸಮಾಜದ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ ಅಸ್ಕಿಹಾಳ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 2024-25 ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಶೇ.85 ಮತ್ತು ಪಿಯುಸಿಯಲ್ಲಿ ಶೇ.90 ಅಂಕಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತದೆ. ವಿದ್ಯಾರ್ಥಿಗಳು ದೃಡೀಕೃತ ಜಾತಿ ಪ್ರಮಾಣ ಪತ್ರ, ಅಂಕಪಟ್ಟಿ,ಭಾವಚಿತ್ರದೊಂದಿಗೆ ಜು.10 ರೊಳಗೆ ಜಿಲ್ಲಾ ಕಚೇರಿಗೆ ಅರ್ಜಿ ಸಲ್ಲಿಸಬಹುದು. ಇದೇ ಸಂದರ್ಭದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 25 ಜನರಿಗೆ ಸನ್ಮಾನಿಸಲಾಗುತ್ತದೆ. ಸಚಿವರು,ಶಾಸಕರುಗಳ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ರವಿಕುಮಾರ ನಾಯಕ, ವಿರೂಪಾಕ್ಷಿ ನಾಯಕ, ರಾಘವೇಂದ್ರ ನಾಯಕ, ರಾಮು ನಾಯಕ, ಹನುಮಂತಪ್ಪ ನಾಯಕ,ಗೋವಿಂದಪ್ಪ ಗಾಣಧಾಳ, ರಘು ನಾಯಕ ಇದ್ದರು.