

ಸರಗೂರು: ವಿದ್ಯಾರ್ಥಿಗಳಿಗೆ ಗುಣಮಟ್ಟದ ವಿದ್ಯಾಭ್ಯಾಸದ ಜತೆಗೆ ಅವರಲ್ಲಿನ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ಎಂಎಂಕೆ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಸ್.ಪಿ.ಪ್ರಕಾಶ್ ಅಭಿಪ್ರಾಯಪಟ್ಟರು.
ತಾಲೂಕಿನ ತುಂಬಸೋಗೆ ಗ್ರಾಮದ ಎಂಎಂಕೆ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಮೈಸೂರಿನ ಟೆರಿಷಿಯನ್ ಕಾಲೇಜು ಆವರಣದಲ್ಲಿ ನಡೆದ ಪದವಿ ಪೂರ್ವ ವಿಭಾಗದ ಜಿಲ್ಲಾ ಮಟ್ಟದ ಬಾಲ್‌ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.
ಗ್ರಾಮೀಣ ಭಾಗಗಳಲ್ಲಿ ಹೆಣ್ಣು ಮಕ್ಕಳನ್ನು ಕಾಲೇಜಿಗೆ ಕಳುಹಿಸುವುದೇ ದೊಡ್ಡ ಸವಾಲು. ಇಂತಹ ಸಂದರ್ಭದಲ್ಲಿ ಪಾಲಕರು ತಮ್ಮ ಮಕ್ಕಳನ್ನು ಕಾಲೇಜಿಗೆ ಕಳುಹಿಸಿ ವಿದ್ಯಾಭ್ಯಾಸ ಕೊಡಿಸುವ ಜತೆಗೆ ಕ್ರೀಡೆಗೂ ಪ್ರೋತ್ಸಾಹ ನೀಡುತ್ತಿರುವುದು ಅಭಿನಂದನೀಯ ಎಂದರು.
ಇದೇ ವೇಳೆ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಾದ ರಂಜಿತಾ, ಐಶ್ವರ್ಯ, ನಿಸರ್ಗ, ಸಿಂಚನಾ, ಜಯಶ್ರೀ, ದಿವ್ಯಾ, ಎಸ್.ವಿ.ಸ್ನೇಹಾ ಹಾಗೂ ಅವರ ಪಾಲಕರನ್ನು ಕಾಲೇಜು ವತಿಯಿಂದ ಅಭಿನಂದಿಸಲಾಯಿತು.
ಉಪನ್ಯಾಸಕರಾದ ವಿರೂಪಾಕ್ಷ, ಸಿದ್ಧಾರ್ಥ್, ಜಾನ್, ಮನೋಜ್, ಸಿದ್ದರಾಜು, ಮೋಹನ್, ಮಹಾದೇವಿ, ತನುಜಾ, ಮುಸ್ಕಾನ್, ಶ್ರುತಿ, ತರಬೇತುದಾರರಾದ ಅನಿಲ್ ಅಂತರಸಂತೆ, ಪ್ರಸನ್ನ ಕುಮಾರ್ ಇದ್ದರು.